ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿಯು ಸತತ 7ನೇ ಬಾರಿಯೂ ರೆಪೋ
(Repo Rate) ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಧಾರ ಕೈಗೊಂಡಿರುವುದಾಗಿ ಶುಕ್ರವಾರ (ಏ.05) ತಿಳಿಸಿದೆ.
ಇದನ್ನೂ ಓದಿ:Taiwan Earthquake: ತೈವಾನ್ ಭೂಕಂಪದಲ್ಲಿ ನಾಪತ್ತೆಯಾಗಿದ್ದ 2 ಭಾರತೀಯರು ಸುರಕ್ಷಿತ: ಕೇಂದ್ರ
ರೆಪೋ ದರವನ್ನು ಶೇ.6.5ರಲ್ಲೇ ಮುಂದುವರಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ನಡೆದ ಹಣಕಾಸು ನೀತಿ ಸಮಿತಿಯ ಸಭೆ ನಡೆದಿದ್ದು, ಶುಕ್ರವಾರ (ಏ.05) ಬೆಳಗ್ಗೆ ಮುಕ್ತಾಯಗೊಂಡಿತ್ತು. ಈ ಬಾರಿಯೂ ರೆಪೋ ದರವನ್ನು ಶೇ.6.5ನ್ನು ಯಥಾಸ್ಥಿತಿ ಕಾಪಾಡಿಕೊಳ್ಳಲು ಒಮ್ಮತದಿಂದ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ರಿವರ್ಸ್ ರೆಪೋ ದರ ಶೇ.3.5ರಲ್ಲಿ ಮುಂದುವರಿಯಲಿದೆ ಎಂದು ಆರ್ ಬಿಐ
(RBI) ತಿಳಿಸಿದೆ. ಹಣದುಬ್ಬರ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಆರ್ಥಿಕ ಸ್ಥಿತಿಗತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎಂದು ದಾಸ್ ಹೇಳಿದರು.