ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಬುಧವಾರ (ಏ.7) ದ್ವೈಮಾಸಿಕ ಹಣಕಾಸು ನೀತಿಯ ಪರಿಶೀಲನೆ ನಡೆಸಿದ್ದು, ರೆಪೋ ದರ, ರಿವರ್ಸ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಇದನ್ನೂ ಓದಿ:ಅಧಿಕಾರಿಗಳಿಂದ ಅಂಗಡಿ ಮೇಲೆ ದಾಳಿ: 200 ಕೆಜಿ ಪ್ಲಾಸ್ಟಿಕ್ ವಶ! ನಗರಸಭಾ ಸದಸ್ಯನ ಬೆದರಿಕೆ
ದೇಶದಲ್ಲಿ ಕೋವಿಡ್ 19 ಸೋಂಕು ಎರಡನೇ ಅಲೆ ಹೆಚ್ಚಳವಾಗುತ್ತಿದ್ದು, ಕೋವಿಡ್ ತಡೆಗಟ್ಟಲು ಹೊಸ ನಿರ್ಬಂಧಗಳನ್ನು ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ ಎಂದು ಆರ್ ಬಿಐ ತಿಳಿಸಿದೆ.
ರೆಪೋ ದರವನ್ನು ಈ ಹಿಂದಿನ ಶೇ.4ರಷ್ಟು ಹಾಗೂ ರಿವರ್ಸ್ ರೆಪೋ ದರ ಶೇ.3.35ರಷ್ಟು ಉಳಿಸಿಕೊಂಡಿರುವುದಾಗಿ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರೆಪೋ ದರ ಯಥಾಸ್ಥಿತಿ ಮುಂದುವರಿಕೆಯಿಂದ ಗೃಹ ಮತ್ತು ವಾಹನಗಳ ಮೇಲಿನ ಸಾಲದ ಇಎಂಐ ಇಳಿಕೆಯಾಗಲಿದೆ ಎಂಬ ಗ್ರಾಹಕರ ನಿರೀಕ್ಷೆ ಹುಸಿಯಾಗಿದೆ.
ಏಪ್ರಿಲ್ 7ರಂದು ಆರ್ ಬಿಐ ದ್ವೈಮಾಸಿಕ ಹಣಕಾಸು ನೀತಿಯ ಸಭೆಯನ್ನು ನಡೆಸಿದ ನಂತರ ಈ ಘೋಷಣೆ ಹೊರಬಿದ್ದಿರುವುದಾಗಿ ವರದಿ ತಿಳಿಸಿದೆ.