ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಶೇ.4ರಲ್ಲಿಯೇ ಮುಂದುವರಿಸಲು ಹಣಕಾಸು ನೀತಿ ಸಮಿತಿ ನಿರ್ಧರಿಸಿರುವುದಾಗಿ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರ (ಏಪ್ರಿಲ್ 08) ತಿಳಿಸಿದ್ದಾರೆ.
ಇದನ್ನೂ ಓದಿ:ಸೋಲಿನ ಬೆನ್ನಲ್ಲೇ ಮತ್ತೊಂದು ಶಾಕ್; ಡೆಲ್ಲಿ ನಾಯಕ ಪಂತ್ ಗೆ 12 ಲಕ್ಷ ರೂ. ದಂಡ!
ರಷ್ಯಾ, ಉಕ್ರೇನ್ ನಡುವಿನ ಯುದ್ಧದಿಂದಾಗಿ ನಾವು ಹೊಸ ಮತ್ತು ಗಂಭೀರವಾದ ಸಮಸ್ಯೆಯನ್ನು ಎದುರಿಸಬೇಕಾಗಿದೆ. ಯುರೋಪಿಯನ್ ಒಕ್ಕೂಟದ ಸಂಘರ್ಷದಿಂದ ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.
ರೆಪೋ ದರವನ್ನು ಶೇ.4ರಲ್ಲಿ ಹಾಗೂ ರಿವರ್ಸ್ ರೆಪೋ ದರವನ್ನು ಶೇ.3.35ರಲ್ಲಿ ಯಥಾಸ್ಥಿತಿಯಲ್ಲಿಯೇ ಮುಂದುವರಿಸಲು ನಿರ್ಧರಿಸಿರುವುದಾಗಿ ದಾಸ್ ಮಾಹಿತಿ ನೀಡಿದ್ದಾರೆ. ನೂತನ ಆರ್ಥಿಕ ವರ್ಷದ (ಏ.1) ಮೊದಲ ಹಣಕಾಸು ನೀತಿಯ ಸಭೆ ಇದಾಗಿದೆ.
2022-23ನೇ ಸಾಲಿನ ಹಣಕಾಸು ವರ್ಷದಲ್ಲಿ ದೇಶೀಯ ಒಟ್ಟು ಉತ್ಪನ್ನ (ಜಿಡಿಪಿ) ದರವನ್ನು ಶೇ.7.2ಕ್ಕೆ ಇಳಿಕೆ ಮಾಡಿರುವುದಾಗಿ ಆರ್ ಬಿಐ ತಿಳಿಸಿದೆ. ಈ ಮೊದಲು ಫೆಬ್ರವರಿಯಲ್ಲಿ ಶೇ.7.ರಷ್ಟು ಜಿಡಿಪಿ ದರವನ್ನು ಘೋಷಿಸಲಾಗಿತ್ತು.
ಫೆಬ್ರವರಿಯಲ್ಲಿ ಹಣದುಬ್ಬರ ಹೆಚ್ಚಳವಾಗಿತ್ತು. ಆರ್ಥಿಕ ಹಿಂಜರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರ್ ಬಿಐ ಸೂಕ್ತ ಕ್ರಮ ತೆಗೆದುಕೊಂಡಿದ್ದು, ಭಾರತದ ಆರ್ಥಿಕತೆ ಚೇತರಿಕೆಯಲ್ಲಿದೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.