ಬೆಂಗಳೂರು: ಅವಧಿ ಪೂರ್ಣಗೊಳ್ಳಲಿರುವ 116 ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪುನರ್ ವಿಂಗಡಣೆ ಹಾಗೂ
ಮೀಸಲಾತಿ ಪಟ್ಟಿಯನ್ನು ಜುಲೈ 12ರೊಳಗೆ ಸಿದ್ಧಪಡಿಸಿ ಅಧಿಸೂಚನೆ ಹೊರಡಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಜ್ಞಾಪನಾ ಪತ್ರ (ಮೆಮೊ) ಸಲ್ಲಿಸಿದೆ.
ಮೊದಲ ಹಂತದಲ್ಲಿ ಜು.4ರಂದು 116 ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ಮತ್ತು ಎರಡನೇ ಹಂತದಲ್ಲಿ ಜು.9ಕ್ಕೆ 102 ಪೌರಾಡಳಿತ ಸಂಸ್ಥೆಗಳಿಗೆ ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿ ಕುರಿತು ಅಧಿಸೂಚನೆ ಹೊರಡಿಸಲಾಗುವುದು. ಅಲ್ಲದೆ, ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್- ಉಪಮೇಯರ್ ಮೀಸಲು ಸ್ಥಾನಗಳ ಸಂಬಂಧ ಜು.12ರಂದು
ಅಧಿಸೂಚನೆ ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಕಾರ್ಯದರ್ಶಿಗಳು ಸಲ್ಲಿಸಿರುವ ಮೆಮೋದಲ್ಲಿ ತಿಳಿಸಲಾಗಿದೆ.
ಸರ್ಕಾರದ ಈ ತೀರ್ಮಾನಕ್ಕೆ ಚುನಾವಣಾ ಆಯೋಗ ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಸರ್ಕಾರ ಹಾಗೂ ಆಯೋಗ ಸೇರಿ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾ. ಬಿ. ಶ್ರೀನಿವಾಸೇಗೌಡ ಅವರಿದ್ದ ವಿಭಾಗೀಯ ಪೀಠಕ್ಕೆ ಮೆಮೊ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಪೀಠ ಗುರುವಾರ ಇತ್ಯರ್ಥಪಡಿಸಿದೆ.
ರಾಜ್ಯದ 218 ಸ್ಥಳೀಯ ಸಂಸ್ಥೆಗಳ ಪೈಕಿ ಮೂರು ಪಾಲಿಕೆಗಳು, 29 ನಗರಸಭೆಗಳು, 56 ಪುರಸಭೆಗಳು, 28 ಪಟ್ಟಣ ಪಂಚಾಯಿತಿಗಳ ಅವಧಿ ಇದೇ ವರ್ಷದ ಮೇ ತಿಂಗಳಿನಿಂದ ಹಂತ-ಹಂತವಾಗಿ ಪೂರ್ಣಗೊಳ್ಳಲಿದೆ. ಹೀಗಾಗಿ, ಒಟ್ಟು 116 ಸ್ಥಳೀಯ ಸಂಸ್ಥೆಗಳಿಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಿದೆ. ಆದರೆ, ಸರ್ಕಾರದಿಂದ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮೀಸಲು ಪಟ್ಟಿ ಸಿದಟಛಿಗೊಳ್ಳದ ಕಾರಣ ಆಯೋಗ ಹೈಕೋರ್ಟ್ ಮೆಟ್ಟಿಲೇರಿತ್ತು.