Advertisement

ಶೀಘ್ರವೇ ಮರು ಚುನಾವಣೆ ಸಾಧ್ಯತೆ

07:35 AM May 29, 2018 | Team Udayavani |

ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಕ್ಕೇರಿದ ಬಳಿಕ ನಾನು ರಾಜ್ಯದ 6.5 ಕೋಟಿ ಜನರ ಮುಲಾಜಿನಲ್ಲಿಲ್ಲ,ಕಾಂಗ್ರೆಸ್‌ನ ಮುಲಾಜಿನಲ್ಲಿದ್ದೇನೆ ಎನ್ನುವುದನ್ನು ಹೇಳುವ ಮೂಲಕ ತಮ್ಮ ಮನಸ್ಸಿನಲ್ಲಿರುವ
ಮಾತುಗಳನ್ನು ಹೊರಹಾಕಿದ್ದಾರೆ.

Advertisement

ಹೀಗಾಗಿ, ಶೀಘ್ರವೇ ವಿಧಾನಸಭಾ ಚುನಾವಣೆ ಮತ್ತೆ ನಡೆದರೂ ನಡೆಯಬಹುದು. ಒಂದು ವೇಳೆ, ಚುನಾವಣೆ ನಡೆದರೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಬಹಳ ದಿನ ಉಳಿಯಲ್ಲ.

ರಾಜ್ಯದಲ್ಲಿ ಕೇವಲ 38 ಸ್ಥಾನ ಗೆದ್ದಿರುವ ಜೆಡಿಎಸ್‌, ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿ ಅಧಿಕಾರ ಹಿಡಿದಿದೆ.
ಆದರೆ, ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next