ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಮತ್ತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 545 ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಸಿದ್ಧರಿದ್ದೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಎಆರ್-ಡಿಎಆರ್ ಆರ್‌ಎಸ್‌ಐ, ಕೆಎಸ್‌ಆರ್‌ಪಿ ಸ್ಪೆಷಲ್ ಆರ್‌ಎಸ್‌ಐ, ಕೆಎಸ್‌ಐಎಸ್‌ಎಫ್ ಪಿಎಸ್‌ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ.
ಹಾಗೆಯೇ 545 ಪಿಎಸ್‌ಐ ಹುದ್ದೆಗಳಿಗೂ ಮರು ಪರೀಕ್ಷೆ ನಡೆಸಲು ಸಿದ್ಧರಿದ್ದೇವೆ. ಆದರೆ ಪ್ರಕರಣ ಇತ್ಯರ್ಥವಾಗುವವರೆಗೂ ಮರು ಪರೀಕ್ಷೆ ನಡೆಸದಂತೆ ನ್ಯಾಯಾಲಯ ನಿರ್ಬಂಧ ವಿಧಿಸಿದ್ದು, ಅದಕ್ಕೆ ನಾವು ಬದ್ಧರಾಗಿದ್ದೇವೆ. ಈ 545 ಪಿಎಸ್‌ಐ ಹುದ್ದೆಗಳ ಮರು ಪರೀಕ್ಷೆ ನಡೆಸಿದ ಕೂಡಲೇ 402 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ.