ಬ್ರಿಟಿಷರ ಕಾಲದಲ್ಲಿ ಸರ್ವೇ ಮಾಡಲಾಗಿತ್ತು.
Advertisement
ಈಗ ಹೊಸದಾಗಿ ಭೂಮಿ ಮಂಜೂರು ಮಾಡಿ, ಬಗರ್ ಹುಕುಂನಲ್ಲಿ ಹಂಚಿಕೆ ಮಾಡಲಾಗಿದೆ. ಇನ್ನು ಕುಟುಂಬಗಳಲ್ಲೂ ಆಸ್ತಿ ಹಂಚಿಕೆ ಮಾಡಿಕೊಂಡಿರುವುದರಿಂದ ಸರ್ವೇ ನಂಬರ್‌ಗಳಲ್ಲಿ ಸಾಕಷ್ಟು ವ್ಯತ್ಯಾಸವಾಗಿರುತ್ತದೆ. ಅದನ್ನು ಸರಿಪಡಿಸಲು ಸಂಪೂರ್ಣ ಸರ್ವೇ ಮಾಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಅಗತ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ಕೊರತೆ ಹಿನ್ನೆಲೆಯಲ್ಲಿ ಸಂಪೂರ್ಣ ಸರ್ವೇ ಮಾಡಲು ಸಾಕಷ್ಟು ಸಿದ್ಧತೆ ಮಾಡಿಕೊಳ್ಳಬೇಕಿದೆ. ಒಂದು ಸಾವಿರ ಸರ್ವೇಯರ್‌ಗಳನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ತಕ್ಷಣಕ್ಕೆ 300 ಮಂದಿ ನಿವೃತ್ತ ಸರ್ವೇಯರ್‌ಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.