Advertisement

ಎರಡು ಲಕ್ಷ ಡಿಜಿಟಲ್‌ ಸದಸ್ಯತ್ವ ಗುರಿ ತಲುಪಿ

02:45 PM Feb 11, 2022 | Team Udayavani |

ರಾಯಚೂರು: ಜಿಲ್ಲೆಯಲ್ಲಿ ಎರಡು ಲಕ್ಷ ಸದಸ್ಯತ್ವದ ಗುರಿಯೊಂದಿಗೆ ಡಿಜಿಟಲ್‌ ಸದಸ್ಯತ್ವ ಅಭಿಯಾನ ಪ್ರಾರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು.

Advertisement

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸದಸ್ಯತ್ವ ಅಭಿಯಾನದ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎಂಬ ಆಶಯದೊಂದಿಗೆ ಕಾಂಗ್ರೆಸ್‌ ಪಕ್ಷ ದೇಶದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಮಹಿಳಾ ಸಬಲೀಕರಣಕ್ಕೆ ಪಣತೊಟ್ಟು ಅನೇಕ ಕೆಲಸ ಮಾಡಿದ ಇತಿಹಾಸವಿದೆ. ನಮ್ಮ ಪಕ್ಷಕ್ಕೆ ಸ್ವಯಂ ಪ್ರೇರಿತವಾಗಿ ಜನರೆ ಸೇರುತ್ತಿದ್ದಾರೆ. ಈ ಅವಕಾಶ ಬಳಸಿಕೊಂಡು ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟುವ ಕೆಲಸ ಮಾಡಬೇಕಿದೆ ಎಂದರು.

ನಮ್ಮ ಪಕ್ಷದ ಜನಪರ ಕೆಲಸಗಳನ್ನು ಜನರಿಗೆ ಮನವರಿಕೆ ಮಾಡಬೇಕು. ಮುಂಬರುವ ಜಿಪಂ, ತಾಪಂ ಚುನಾವಣೆಗೆ ಈ ಸದಸ್ಯತ್ವದಿಂದ ನಾವು ಸಿದ್ಧರಾಗಬೇಕು. ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಸದಸ್ಯತ್ವ ಗುರಿಯೊಂದಿಗೆ ಇಂದಿನಿಂದಲೆ ಕೆಲಸ ಪ್ರಾರಂಭಿಸಿ ಎಂದರು.

ಎಐಸಿಸಿ ಕಾರ್ಯದರ್ಶಿ ಎನ್‌.ಎಸ್‌. ಬೋಸರಾಜು ಮಾತನಾಡಿ, ಡಿಜಿಟಲ್‌ ಸದಸ್ಯತ್ವದಿಂದ ಬೊಗಸ್‌ ಸದಸ್ಯತ್ವಕ್ಕೆ ಅವಕಾಶವಿಲ್ಲ. ಅಭ್ಯರ್ಥಿಯಿದ್ದರೆ ಮಾತ್ರ ಸದಸ್ಯತ್ವ ನೋಂದಣಿಯಾಗಲಿದೆ. ಪಕ್ಕದ ರಾಜ್ಯ ತೆಲಂಗಾಣದಲ್ಲಿ ಡಿಜಿಟಲ್‌ ಸದಸ್ಯತ್ವ ಅಭಿಯಾನಕ್ಕೆ ಭಾರಿ ಬೆಂಬಲ ಸಿಕ್ಕಿದ್ದು, ನಮ್ಮಲ್ಲೂ ಪಕ್ಷದ ಬಲವರ್ಧನೆಗಾಗಿ ಕಾರ್ಯಕರ್ತರು ಹೆಚ್ಚು ಹೆಚ್ಚು ಡಿಜಿಟಲ್‌ ಸದಸ್ಯತ್ವ ನೋಂದಣಿ ಮಾಡಿಸಬೇಕು. ಇದರಿಂದ ಜಿಲ್ಲೆಯಲ್ಲಿ ಪಕ್ಷದ ಶಕ್ತಿ ವೃದ್ಧಿಯಾಗಲಿದೆ ಎಂದರು.

ಜಿಲ್ಲಾಧ್ಯಕ್ಷ ಬಿ.ವಿ.ನಾಯಕ ಮಾತನಾಡಿ, ಎಲ್ಲ ಬ್ಲಾಕ್‌ನ ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗುವಂತೆ ಕರೆ ನೀಡಿದರು.

Advertisement

ಸದಸ್ಯತ್ವ ಅಭಿಯಾನದ ಪರಿಶೀಲನಾ ಸಭೆಯಲ್ಲಿ ಶಾಸಕರಾದ ಬಸನಗೌಡ ದದ್ದಲ್‌, ಬಸನಗೌಡ ತುರ್ವಿಹಾಳ, ಮಾಜಿ ಶಾಸಕರಾದ ಹಂಪಯ್ಯ ನಾಯಕ, ಹಂಪನಗೌಡ ಬಾದರ್ಲಿ, ಎಂಎಲ್‌ಸಿ ಶರಣಗೌಡ ಬಯ್ನಾಪೂರ, ಕೆಪಿಸಿಸಿ ವಕ್ತಾರ ಎ. ವಸಂತ ಕುಮಾರ, ಕೆ.ಶಾಂತಪ್ಪ, ಜಿ.ಶಿವಮೂರ್ತಿ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ರಾಜ ಶೇಖರ ನಾಯಕ, ನಿರ್ಮಲಾ ಬೆಣ್ಣೆ, ನವನೀತ ಆದೋನಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next