Advertisement

ಪರೀಕ್ಷೆ ಭಯ ಬಿಟ್ಟು ಅಭ್ಯಾಸ ಮಾಡಿ

03:24 PM Feb 10, 2020 | Team Udayavani |

ಗುಂಡ್ಲುಪೇಟೆ: ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡ ಮತ್ತು ಭಯ ಬಿಟ್ಟು, ಅಭ್ಯಾಸ ಮಾಡುವ ಮೂಲಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಬೇಕು ಎಂದು ಶಾಸಕ ಸಿ.ಎಸ್‌.ನಿರಂಜನ ಕುಮಾರ್‌ ಕಿವಿಮಾತು ಹೇಳಿದರು.

Advertisement

ಪಟ್ಟಣದ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಹೊರತಂದಿರುವ ದಾರಿದೀಪ ಕೈಪಿಡಿಯನ್ನು ಬಿಡುಗಡೆಗೊಳಿಸಿದ ಅವರು ಮಾತನಾಡಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಮಕ್ಕಳಿಗೆ ಮನವರಿಕೆ ಮಾಡುವುದಕ್ಕಾಗಿ ಪ್ರಧಾನಿ  ನರೇಂದ್ರ ಮೋದಿ ಒಂದು ದಿನವನ್ನು ಮೀಸಲಿಟ್ಟಿದ್ದರು ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿದೆ. ಇದರಿಂದ ಶಿಕ್ಷಣ ಇಲಾಖೆಯು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡುವ ದಾರಿದೀಪ ಕೈಪಿಡಿ ಸಿದ್ಧಗೊಳಿಸಿದೆ. ಸದ್ಯದಲ್ಲೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಪಾಲಕರ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಫೋನ್‌ಇನ್‌ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೆ ಸಂಬಂಧಪಟ್ಟ ಸಹಾಯವಾಣಿ ಕೇಂದ್ರವನ್ನೂತೆರೆಯಲಾಗುತ್ತದೆ. ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ಉತ್ತಮ ಫ‌ಲಿತಾಂಶ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯ್ತಿ ಅಧ್ಯಕ್ಷ ಎಸ್‌.ಎಸ್‌.ಮಧುಶಂಕರ್‌, ಬಿಇಒ ಎಸ್‌ .ಸಿ.ಶಿವಮೂರ್ತಿ, ಬಿ.ಆರ್‌.ಸಿ ನಂದೀಶ್‌, ತಾಪಂ ಇಒ ಕುಲದೀಪ್‌, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next