Advertisement

ಹವ್ಯಾಸ ಬೆಳೆಸಲು ಓದುವ ತಿಂಗಳು ಕಾರ್ಯಕ್ರಮ

03:15 PM Jul 23, 2019 | Suhan S |

ಕಲಬುರಗಿ: ಸಾರ್ವಜನಿಕರು ಹಾಗೂ ವಿಶೇಷವಾಗಿ ಶಾಲಾ ಮಕ್ಕಳನ್ನು ಗ್ರಂಥಾಲಯದೆಡೆಗೆ ಆಕರ್ಷಿಸಿ ಅವರಲ್ಲಿ ಪುಸ್ತಕ ಓದುವ ಹವ್ಯಾಸ ಮತ್ತು ಗ್ರಂಥಾಲಯಗಳ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ‘ಓದುವ ತಿಂಗಳು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ| ಸತೀಶಕುಮಾರ ಹೊಸಮನಿ ಹೇಳಿದರು.

Advertisement

ನಗರದ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಓದುವ ತಿಂಗಳು ಕಾರ್ಯಕ್ರಮದಲ್ಲಿ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು.

ಮಕ್ಕಳು ಕೇವಲ ಪಠ್ಯಕ್ರಮಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಓದುವುದು ಮಾತ್ರವಲ್ಲದೇ ಬಿಡುವಿನ ವೇಳೆಯಲ್ಲಿ ಸಾರ್ವಜನಿಕ ಗ್ರಂಥಾಲಯಕ್ಕೆ ಹೋಗಿ ಮಹಾನ್‌ ವ್ಯಕ್ತಿಗಳ ಜೀವನ ಚರಿತ್ರೆ ಹಾಗೂ ಒಳ್ಳೆಯ ಸಾಹಿತ್ಯದ ಪುಸ್ತಕಗಳನ್ನು ಓದುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಉತ್ತಮ ರೀತಿಯಾಗಿ ಬೆಳೆಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ| ಎಸ್‌.ಆರ್‌. ರಂಗನಾಥನ್‌ ಹಾಗೂ ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ವಿವಿಧ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಗ್ರಂಥಾಲಯದ ಎಲ್ಲ ವಿಭಾಗಗಳಿಗೆ ಕರೆದೊಯ್ದು ಗ್ರಂಥಾಲಯ ಚಟುವಟಿಕೆಗಳ ಪರಿಚಯ ಮಾಡಿಕೊಡಲಾಯಿತು.

Advertisement

ಗುಲಬರ್ಗಾ ವಿಶ್ವವಿದ್ಯಾಲಯ ಗ್ರಂಥಾಲಯದ ಉಪಗ್ರಂಥಪಾಲಕ ಹಾಗೂ ಕರ್ನಾಟಕ ರಾಜ್ಯ ಉನ್ನತ ಮಟ್ಟದ ಪುಸ್ತಕ ಆಯ್ಕೆ ಸಮಿತಿ ಸದಸ್ಯರಾದ ಡಾ| ಸುರೇಶ ಜಂಗೆ, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಶಿವರಾಜ ಪಾಟೀಲ, ಶರಣಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಸಂಯುಕ್ತ ಕಾಲೇಜಿನ ಕನ್ನಡ ಸಹ ಶಿಕ್ಷಕ ಎನ್‌ ಮಡಿವಾಳಪ್ಪನವರ, ಶರಣಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಸಂಯುಕ್ತ ಕಾಲೇಜಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ನಗರ ಕೇಂದ್ರ ಗ್ರಂಥಾಲಯದ ಸಿಬ್ಬಂದಿ ಇದ್ದರು.

ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಅಜಯಕುಮಾರ ಸ್ವಾಗತಿಸಿದರು. ದೀಪಕ ಎಂ. ಕಮತರ ಕಾರ್ಯಕ್ರಮ ನಿರೂಪಿಸಿದರು. ಶರಣಬಸಪ್ಪ ಎಸ್‌. ಪಾಟೀಲ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next