Advertisement

ಪ್ರೌಢಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮಾರ್ಗಸೂಚಿ ಪ್ರಕಟ

10:31 PM Aug 22, 2022 | Team Udayavani |

ಬೆಂಗಳೂರು: ಸರಕಾರಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಮರು ಹೊಂದಾಣಿಕೆ ಬಳಿಕ ಹುದ್ದೆಗಳನ್ನು ನಿಗದಿಪಡಿಸಿ ಮಂಜೂರು ಮಾಡುವುದಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಆ ಪ್ರಕಾರವಾಗಿ ರಾಜ್ಯದ 4,821 ಶಾಲೆಗಳಲ್ಲಿ 43,353 ಹುದ್ದೆಗಳು ಮಂಜೂರಾಗಿದೆ.

Advertisement

ರಾಜ್ಯದ ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕಡಿಮೆ ಇದ್ದರೂ, ಶಿಕ್ಷಕರ ಸಂಖ್ಯೆ ಹೆಚ್ಚಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ. ಇದನ್ನು ಮರು ಹೊಂದಾಣಿಕೆ ಮಾಡುವ ಉದ್ದೇಶದಿಂದ ಶಿಕ್ಷಣ ಇಲಾಖೆಯು ಮಂಜೂರಾದ ಹುದ್ದೆಗಳ ಪಟ್ಟಿ ರೂಪಿಸಿದೆ.

ಈ ಪಟ್ಟಿಯನ್ನು 70 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಂತೆ (ವಿಭಾಗ) ಹಾಗೂ ಕೆಪಿಎಸ್‌, ಆದರ್ಶ ಶಾಲೆಗಳಲ್ಲಿ 40 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಂತೆ ವಿಂಗಡಿಸಿದೆ. 5 ಅಥವಾ ಅದಕ್ಕಿಂತ ಹೆಚ್ಚು ವಿಭಾಗಗಳಿದ್ದಲ್ಲಿ ಮುಖ್ಯ ಶಿಕ್ಷಕರನ್ನು ಹೊರತುಪಡಿಸಿ ಶಿಕ್ಷಕರ ಹುದ್ದೆಗಳನ್ನು ಒದಗಿಸಿದೆ.

ಈ ಮಂಜೂರಾದ ಹುದ್ದೆ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಅಳವಡಿಸಿದ್ದು, ಜಿಲ್ಲಾ ಉಪನಿರ್ದೇಶಕರು ಮತ್ತು ಬಿಇಒಗಳು ಶಾಲೆಗಳ ನಾಮಫಲಕಗಳಲ್ಲಿ ಇದನ್ನು ಪ್ರಕಟಿಸುವಂತೆ ಸೂಚಿಸಿದ್ದಾರೆ. ಶಿಕ್ಷಕರ ವರ್ಗಾವಣೆ ವೇಳೆ ಮರು ಹೊಂದಾಣಿಕೆ ಕಾರ್ಯ ಕೈಗೆತ್ತಿಕೊಳ್ಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next