Advertisement

ರಾಷ್ಟ್ರೀಯ ಶಿಕ್ಷಣ ನೀತಿಯ ಮುಕ್ತ ಚರ್ಚೆಗೆ ಸಿದ್ಧ: ಸಿಎಂ ಬೊಮ್ಮಾಯಿ

12:00 AM Sep 16, 2021 | Team Udayavani |

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಬುಧವಾರ ಭಾರತ ರತ್ನ ಸರ್‌ ಎಂ. ವಿಶ್ವೇಶ್ವರಯ್ಯ ಅವರ 161ನೇ ಜಯಂತಿ ಅಂಗವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಇಂದಿನ ಕಾಲಕ್ಕೆ ತಕ್ಕ ಹಾಗೆ ಪ್ರಸ್ತುತ ವಾಗುವಂತೆ, ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗುವುದು ಎಂದು ತಿಳಿಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಬಗ್ಗೆಯೂ ಸಮಿತಿ ರಚಿಸಿ ಅನುಷ್ಠಾನದ ಬಗ್ಗೆ ತೀರ್ಮಾನಿಸಲಾಗುವುದು. ಸರಕಾರ ಎಲ್ಲ ವಿಚಾರದಲ್ಲೂ ಮುಕ್ತವಾಗಿರಲಿದೆ ಎಂದೂ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next