Advertisement

ಕಲ್ಲಿದ್ದಲು ಹಗರಣದ ಯಾವುದೇ ತನಿಖೆಗೂ ಸಿದ್ಧ: BSYಗೆ ಡಿಕೆಶಿ ತಿರುಗೇಟು

04:31 PM Oct 21, 2017 | Sharanya Alva |

ಬೆಂಗಳೂರು/ನವದೆಹಲಿ: ಕಲ್ಲಿದ್ದಲು ಹಗರಣದ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಿಟ್ ರನ್ ಆರೋಪ ಮಾಡುತ್ತಿದ್ದಾರೆ. ಕಲ್ಲಿದ್ದಲು ಹಗರಣದ ಯಾವುದೇ ತನಿಖೆಗೂ ನಾವು ಸಿದ್ಧ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಲಿದ್ದಲು ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ, ಸುಮಾರು 418 ಕೋಟಿ ರೂಪಾಯಿ ಹಗಲು ದರೋಡೆ ನಡೆಸಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ಆರೋಪಿಸಿದ್ದರು. ಇದರ ಬೆನ್ನಲ್ಲೇ ನವದೆಹಲಿಯಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬೆಂಗಳೂರಿನಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು.

ಯಡಿಯೂರಪ್ಪ ಅವರು ಆರೋಪಿಸಿದಂತೆ ಯಾವುದೇ ರೀತಿಯ ಹಗರಣ ನಡೆದಿಲ್ಲ. ಕಲ್ಲಿದ್ದಲು ಹಗರಣ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಆರೋಪದ ಬಗ್ಗೆ ಯಾವುದೇ ಮಾಧ್ಯಮದಲ್ಲೂ ಬಹಿರಂಗ ಚರ್ಚೆ ಸಿದ್ಧ ಎಂದು ಸವಾಲು ಹಾಕಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ಆಗುತ್ತಿದ್ದ ನಷ್ಟ ತಪ್ಪಿಸಲು ನಾವು ಈ ಕ್ರಮ ತೆಗೆದುಕೊಂಡಿದ್ದೇವೆ ಎಂದರು.

ರಾಜ್ಯದಲ್ಲಿ ನಮ್ಮದೇ ಕೋಲ್ ಬ್ಲಾಕ್ ಇಲ್ಲದೇ ಇರುವುದರಿಂದ ನಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ವಿದ್ಯುತ್ ಒದಗಿಸುವ ನಿಟ್ಟಿನಲ್ಲಿ ನಮ್ಮದೇ ಕೋಲ್ ಬ್ಲಾಕ್ ರಚಿಸಿ ನಷ್ಟವನ್ನು ತಪ್ಪಿಸಿದ್ದೇವೆ ಎಂದು ಡಿಕೆಶಿ ತಿಳಿಸಿದರು.

ಬಿಎಸ್ ವೈ ಆರೋಪ ನೂರಕ್ಕೆ ನೂರು ಸುಳ್ಳು: ದಿನೇಶ್ ಗುಂಡುರಾವ್

Advertisement

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಬಿಎಸ್ ವೈ ಮಾಡಿರುವ ಆರೋಪಗಳೆಲ್ಲಾ ಸುಳ್ಳು. ಬಿಎಸ್ ವೈ ತಮ್ಮ ಗೌರವವನ್ನು ತಾವೇ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಅವರನ್ನು ಯಾರೋ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next