ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
Advertisement
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಿಇಟಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊ ಳ್ಳಬೇಕು. ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ಹಾಗೂ ಕೊಠಡಿಯಲ್ಲಿ ಗಡಿಯಾರವನ್ನು ಅಳವಡಿ ಸಬೇಕು. ಆಸನದ ವ್ಯವಸ್ಥೆ, ಕುಡಿವ ನೀರು ಮತ್ತು ಶೌಚಾಲಯ ವ್ಯವಸ್ಥೆ ಜತೆಗೆ ಎಲ್ಲಾ ಕೇಂದ್ರಗಳಿಗೆ ಒಂದು ದಿನದ ಮುಂಚಿತವಾಗಿ ಮತ್ತು ಎರಡು ಅವಧಿಗಳ ಪರೀಕ್ಷೆ ಮುಕ್ತಾಯದ ನಂತರ ಸ್ಯಾನಿಟೆ„ಸ್ ಮಾಡಿಸುವುದು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಪ್ರದೇಶವನ್ನು ಸ್ವತ್ಛವಾಗಿಡುವ ಕುರಿತು ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಪ್ರತಿ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮತ್ತು ಹ್ಯಾಂಡ್ ಸ್ಯಾನಿಟೈಸ್ ಮಾಡಲು ಆರೋಗ್ಯ ಸಹಾಯಕಿಯರನ್ನು ನೇಮಿಸಲು ಸೂಚಿಸಿದರು.
Related Articles
ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಮೇಲುಸ್ತುವಾರಿಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ಪರೀಕ್ಷೆ ಮುಗಿದ ನಂತರ ಸರಿಯಾದ ಕ್ರಮದಲ್ಲಿ ಲೋಪವಾಗದಂತೆ ನಿಗದಿತ ಸಮಯದಲ್ಲಿ ಜಿಲ್ಲಾ ಖಜಾನೆಗೆ ತಲುಪಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆ ಸೂಚನೆ ನೀಡಿದರು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿಗಳು ಮತ್ತು ಸಿಬ್ಬಂದಿ ಪರೀಕ್ಷಾ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು.
Advertisement