Advertisement

ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

03:17 PM Jun 14, 2022 | Team Udayavani |

ಚಿಕ್ಕಬಳ್ಳಾಪುರ: ವೃತ್ತಿಪರ ಕೋರ್ಸ್‌ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜೂನ್‌ 16 ಮತ್ತು 17 ರಂದು ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ 12 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 5,328 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯುತವಾಗಿ
ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಎಚ್‌.ಅಮರೇಶ್‌ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಿಇಟಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್‌ ಮುಂಜಾಗ್ರತಾ ಕ್ರಮಗಳನ್ನು ಕೈಗೊ ಳ್ಳಬೇಕು. ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ಹಾಗೂ ಕೊಠಡಿಯಲ್ಲಿ ಗಡಿಯಾರವನ್ನು ಅಳವಡಿ ಸಬೇಕು. ಆಸನದ ವ್ಯವಸ್ಥೆ, ಕುಡಿವ ನೀರು ಮತ್ತು ಶೌಚಾಲಯ ವ್ಯವಸ್ಥೆ ಜತೆಗೆ ಎಲ್ಲಾ ಕೇಂದ್ರಗಳಿಗೆ ಒಂದು ದಿನದ ಮುಂಚಿತವಾಗಿ ಮತ್ತು ಎರಡು ಅವಧಿಗಳ ಪರೀಕ್ಷೆ ಮುಕ್ತಾಯದ ನಂತರ ಸ್ಯಾನಿಟೆ„ಸ್‌ ಮಾಡಿಸುವುದು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಪ್ರದೇಶವನ್ನು ಸ್ವತ್ಛವಾಗಿಡುವ ಕುರಿತು ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಪ್ರತಿ ಕೇಂದ್ರದಲ್ಲಿ ಥರ್ಮಲ್‌ ಸ್ಕ್ಯಾನಿಂಗ್‌ ಮತ್ತು ಹ್ಯಾಂಡ್‌ ಸ್ಯಾನಿಟೈಸ್‌ ಮಾಡಲು ಆರೋಗ್ಯ ಸಹಾಯಕಿಯರನ್ನು ನೇಮಿಸಲು ಸೂಚಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿಯೋಜಿತ ಸಿಬ್ಬಂದಿಗೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ನೀಡಬೇಕು. ಸರ್ಜಿಕಲ್‌ ಮಾಸ್ಕ್ ಧರಿಸಬೇಕು. ಪರೀಕ್ಷಾರ್ಥಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ಯಾವುದೇ ತರಹದ ಮೊಬೆ„ಲ್‌, ಬ್ಲೂಟೂತ್‌, ಪೇಜರ್‌, ವೈರೆಲ್ಸ್‌ ಸೆಟ್‌, ಲಾ ಟೇಬಲ್‌, ಕ್ಯಾಲ್ಕುಲೇಟರ್‌ ಹಾಗೂ ರಿಸ್ಕ್ ವಾಚ್‌ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ಶಾಂತಿ ಪಾಲನೆ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 144 ಸೆಕ್ಷನ್‌ ನಿಷೇಧಾಜ್ಞೆ ಜಾರಿಗೊಳಿಸಿ ಈ ಪ್ರದೇಶವನ್ನು ನಿರ್ಬಂದಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಪರೀಕ್ಷಾ ಅವಧಿಯಲ್ಲಿ ಜೆರಾಕ್ಸ್‌ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸ್‌ ಇಲಾಖೆಗೆ ಸೂಚಿಸಿದರು. ಪಿಯು ಶಿಕ್ಷಣ ಇಲಾಖೆಯ ಆನಂದ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಜಿಲ್ಲಾ ತ್ರಿಸದಸ್ಯ ಸಮಿತಿ ರಚನೆ
ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಮೇಲುಸ್ತುವಾರಿಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ಪರೀಕ್ಷೆ ಮುಗಿದ ನಂತರ ಸರಿಯಾದ ಕ್ರಮದಲ್ಲಿ ಲೋಪವಾಗದಂತೆ ನಿಗದಿತ ಸಮಯದಲ್ಲಿ ಜಿಲ್ಲಾ ಖಜಾನೆಗೆ ತಲುಪಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸ್‌ ಸಿಬ್ಬಂದಿ ನಿಯೋಜಿಸುವಂತೆ ಸೂಚನೆ ನೀಡಿದರು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿಗಳು ಮತ್ತು ಸಿಬ್ಬಂದಿ ಪರೀಕ್ಷಾ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next