Advertisement

ಶಿಕ್ಷಕರ ಕ್ಷೇತ್ರ ಚುನಾವಣೆ ಸುಗಮಕ್ಕೆತಂಡ ರಚನೆ

04:03 PM Oct 06, 2020 | Suhan S |

ಬೀದರ: ವಿಧಾನ ಪರಿಷತ್‌ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ- 2020ರ ಅಂಗವಾಗಿ ಜಿಲ್ಲೆಯಲ್ಲಿ ಒಟ್ಟು 34 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 3,390 ಪುರುಷ ಮತ್ತು 1472 ಮಹಿಳೆಯರು ಸೇರಿ ಒಟ್ಟು 4862 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಧಿಕಾರಿ ಆರ್‌. ರಾಮಚಂದ್ರನ್‌ ಮಾಹಿತಿ ನೀಡಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷತ್‌ ಚುನಾವಣೆ ಮಾದರಿ ನೀತಿ ಸಂಹಿತೆಯು ಸೆ.29 ರಿಂದಲೇ ಜಾರಿಯಾಗಿದೆ. ಅ.1ರಂದು ಅಧಿ ಸೂಚನೆ ಹೊರಡಿಸಲಾಗಿದೆ. ಅ.8ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. 9ರಂದು ನಾಮಪತ್ರಗಳ ಪರಿಶೀಲನೆ, 12ಕ್ಕೆ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆ ದಿನವಾಗಿದೆ. ಅ.28ಕ್ಕೆ ಮತದಾನ ಮತ್ತು ನ. 2ರಂದು ಬೆಳಗ್ಗೆ 8ರಿಂದ ಮತ ಎಣಿಕೆ ನಡೆಯಲಿದೆ. ನ. 5ಕ್ಕೆ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ವಿವರಿಸಿದರು.

ಈಗಾಗಲೆ ವಿವಿಧ ಚುನಾವಣೆ ಕೆಲಸಗಳಿಗೆ ನೋಡಲ್‌ ಅಧಿ ಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಲು ವಿಶೇಷವಾಗಿ ಕೋವಿಡ್‌-19ರ ನೋಡಲ್‌ ಅಧಿಕಾರಿಯನ್ನಾಗಿ ಸಹಾಯಕ ಆಯುಕ್ತರು ಬೀದರ ಉಪ ವಿಭಾಗ ಮತ್ತು ಡಿಎಚ್‌ಒ ಅವರನ್ನು ನೇಮಿಸಲಾಗಿದೆ. ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾ, ತಾಲೂಕು ಮಟ್ಟದಲ್ಲಿ ತಂಡಗಳನ್ನು ರಚಿಸಲಾಗಿದೆ. ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಕುರಿತು ದೂರುಗಳಿದ್ದಲ್ಲಿ ಡಿಸಿ ಕಚೇರಿಯ ಕಂಟ್ರೋಲ್‌ ರೂಂ. 08482-226290ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಕೋವಿಡ್‌-19 ಸಾಂಕ್ರಮಿಕವಾಗಿ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಚಾಚು ತಪ್ಪದೆ ಪಾಲಿಸುತ್ತಾ ಹಾಗೂ ಚುನಾವಣೆಯ ಮತದಾರರನ್ನು ಮತಗಟ್ಟೆ ಸಿಬ್ಬಂದಿಗಳನ್ನಾಗಿ ನೇಮಿಸಬಾರದೆಂಬ ಅಂಶವನ್ನು ಗಣನೆಗೆ ತೆಗೆದುಕೊಂಡು ಮತಗಟ್ಟೆ ಅಧಿ ಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕಾತಿ ಮಾಡುವ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ಹೇಳಿದರು. ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಎಸ್‌ಪಿ ನಾಗೇಶ ಡಿ.ಎಲ್‌., ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಇತರರು ಇದ್ದರು.

ರಾಜಕೀಯ ಮುಖಂಡರ ಜತೆ ಸಭೆ : ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ-2020 ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಅಧ್ಯಕ್ಷತೆಯಲ್ಲಿ ನಗರದ ಡಿಸಿ ಕಚೇರಿಯಲ್ಲಿ ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಪ್ರತಿನಿಧಿ  ಗಳ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಧಿಕಾರಿಗಳು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರುವ ಅರ್ಹ ಮತದಾರರಿಗೆ ಚುನಾವಣೆ ಸಂದರ್ಭದಲ್ಲಿ ಪೂರಕ ಪಟ್ಟಿಯಲ್ಲಿ ಹೆಸರು ಸೇರಿಸಿ ಮತದಾನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು. ವಿಧಾನ ಪರಿಷತ್‌ ಚುನಾವಣೆಗಾಗಿ ಮತದಾರರ ಪಟ್ಟಿಯನ್ನು

Advertisement

ಈಗಾಗಲೇ ಸಿದ್ಧಪಡಿಸಲಾಗಿದೆ. 2020ರ ಜನವರಿ 16ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಿದ ತರುವಾಯ, ಜಿಲ್ಲೆಯ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ-2ರಲ್ಲಿ ಪ್ರಮಾಣ ಪತ್ರದೊಂದಿಗೆ ನಿರಂತರ ಪ್ರಕ್ರಿಯೆ ಅವಧಿಯಲ್ಲಿ ಅರ್ಹ ಮತದಾರರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶವಿದ್ದು, ಅ.8 ಕೊನೆ ದಿನವಾಗಿದೆ ಎಂದರು. ಜಿಲ್ಲೆಯಲ್ಲಿ ಒಟ್ಟು 34 ಮತಗಟ್ಟೆಗಳಿದ್ದು, ಔರಾದ ತಾಲೂಕು 541, ಭಾಲ್ಕಿ 743, ಬೀದರ 1840, ಬಸವಕಲ್ಯಾಣ 918 ಮತ್ತು ಹುಮಾನಾಬಾದ 820 ಮತದಾರರು ಸೇರಿ ಒಟ್ಟು 4862 ಮತದಾರರು ಜಿಲ್ಲೆಯಲ್ಲಿದ್ದಾರೆ ಎಂದು ಡಿಸಿ ರಾಜಕೀಯ ಪಕ್ಷಗಳ ಮುಖಂಡರುಗಳು ಮತ್ತು ಪ್ರತಿನಿಧಿ ಗಳಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next