Advertisement

ವಿಶ್ವ ಪರಿಸರ ದಿನಾಚರಣೆಗೆ ಸಕಲ ಸಿದ್ಧತೆ

06:57 AM Jun 02, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ವಿಶ್ವ ಪರಿಸರ ದಿನಾಚರಣೆ ಯನ್ನು ಜೂ.5 ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಎರಡನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತ  ನಾಡಿ, ತಾಲೂಕು  ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಶಾಲಾ ಕಾಲೇಜು, ಗುಂಡುತೋಪು, ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳ ಆವರಣದಲ್ಲಿ ಸಸಿಗಳನ್ನು ನೆಡಬೇಕು ಎಂದರು.

ಉಸ್ತುವಾರಿ ಸಚಿವರ ಚಾಲನೆ: ಜೂ.5 ರಂದು  ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಿಡ್ಲಘಟ್ಟ ತಾಲೂಕಿನ ತಾತಹಳ್ಳಿಯಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿ ಅಚ್ಚುಕಟ್ಟಾಗಿ ನೆರವೇರಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು  ಕ್ರಮಕೈಗೊಳ್ಳಬೇಕು. ಪರಿಸರ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್‌, ಜಿಪಂ  ಸಿಇಒ ಬಿ.ಫೌಝೀಯಾ ತರುನ್ನುಮ್‌, ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್‌, ಅಪರ ಜಿಲ್ಲಾಧಿಕಾರಿ ಆರತಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಅಧಿಕಾರಿ ವಿಜಯಲಕ್ಷಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು  ಹಾಜರಿದ್ದರು.

ಶಾಲೆಗಳಿಗೆ ಬೇಕು 30 ಸಾವಿರ ಗಿಡ: ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಶ್‌ ಮಾತನಾಡಿ, ಜಿಲ್ಲಾದ್ಯಂತ 1,200 ಶಾಲೆಗಳಲ್ಲಿ ಒಟ್ಟು 126 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಸಸಿ ನೆಡುವ ರೂಪುರೇಷಗಳನ್ನು ಸಿದ್ಧಪಡಿಸಿದ್ದು, 30 ಸಾವಿರ ಸಸಿಗಳನ್ನು ನೆಡಲಾಗುತ್ತದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next