Advertisement

3ನೇ ಅಲೆ ತಡೆಗೆ ಸನ್ನದ್ದ : ಚವ್ಹಾಣ

08:52 PM Jun 03, 2021 | Team Udayavani |

ಬೀದರ: ಕೋವಿಡ್‌-19 ಎರಡನೇ ಅಲೆ ಈಗಾಗಲೇ ಮುಕ್ತಾಯದ ಹಂತಕ್ಕೆ ಬಂದಿದೆ. ಅಂತೆಯೇ ಸಂಭವನೀಯ ಮೂರನೇ ಅಲೆ ತಡೆಗೂ ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ತಾವು ಜಿಲ್ಲಾಡಳಿತಕ್ಕೆ ತಿಳಿಸಿದ್ದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು.

Advertisement

ನಗರದ ಜಿಲ್ಲಾ ಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಮಕ್ಕಳಿಗೂ ಕೋವಿಡ್‌ ಹರಡುವ ಸಾಧ್ಯತೆ ಇದೆ ಎಂಬುದು ಪತ್ರಿಕೆಗಳಲ್ಲಿ ವರದಿಯಾಗಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ತಾವು ಆರೋಗ್ಯ ಇಲಾಖೆ ಸಚಿವರೊಂದಿಗೆ ಮಾತನಾಡಿ ಪ್ರತಿ ತಾಲೂಕಿನಲ್ಲಿ ಮಕ್ಕಳ ಆರೈಕೆ ಕೇಂದ್ರ ಪ್ರಾರಂಭಿಸುವ ಬಗ್ಗೆ ತಿಳಿಸಿದ್ದೇನೆ.

ಅಲ್ಲದೇ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವುದಕ್ಕೆ ಸಂಬಂಧಿ ಸಿದಂತೆ ಈಗಾಗಲೇ ಜಿಲಾಧಿÉಕಾರಿಗಳು ಮತ್ತು ಬ್ರಿಮ್ಸ್‌ ನಿರ್ದೇಶಕರೊಂದಿಗೆ ಮಾತನಾಡಿ, ಮಕ್ಕಳ ಚಿಕಿತ್ಸೆಗೆ ಪ್ರತ್ಯೇಕ ವಾಡ್‌ ìಗಳನ್ನು ಮೀಸಲಿರಿಸುವುದು ಮತ್ತು ಅಗತ್ಯ ಪ್ರಮಾಣದಲ್ಲಿ ಮಕ್ಕಳರೋಗ ತಜ್ಞ ವೈದ್ಯರು ಇರುವಂತೆ ಈಗಿನಿಂದಲೇ ನೋಡಿಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ತಿಳಿಸಿದ್ದಾಗಿ ಹೇಳಿದರು.

ಜೂ.2ರಂದು 22 ಜನರಿಗೆ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ. ಕೋವಿಡ್‌ ಡೆತ್‌ ವರದಿಯಾಗಿಲ್ಲ. 37 ಜನರು ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3000 ಜನರಿಗೆ ಕೋವಿಡ್‌ ತಪಾಸಣೆ ನಡೆಸಲಾಗಿದ್ದು, ಹೊಸದಾಗಿ ಮೂರು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಒಟ್ಟು ಪಾಸಿಟಿವ್‌ ಕೇಸಸ್‌ 23,882, ಸಕ್ರಿಯ ಪ್ರಕರಣಗಳು 303, ಹೋಂ ಐಸೋಲೇಷನ್‌ 204 ಎಂದು ಸಚಿವರು ಮಾಹಿತಿ ನೀಡಿದರು. ರೆಮ್‌ಡಿಸಿವರ್‌, ಬೆಡ್‌ನ‌ಲ್ಲಿ ಯಾವುದೇ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ಬೀದರನ ಬ್ರಿಮ್ಸ್‌ಗೆ ಆಕ್ಸಿಜನ್‌ ಲಭ್ಯತೆಗೆ ಸಹಕಾರ ನೀಡಿದ್ದು ಅವರಿಗೆ ಅಭಿನಂದನೆಗಳು ಎಂದು ಇದೆ ವೇಳೆ ಸಚಿವರು ತಿಳಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next