ಬೆಳಗಾವಿ: ರಾಜ್ಯದಲ್ಲಿ ಒಂದು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಿಗದಿಯಾಗಿದೆ. ಸುರೇಶ್ ಅಂಗಡಿಯವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಎಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದೆ. ಈ ಸಂಬಂಧ ರಾಜಕೀಯ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳ ಬಗ್ಗೆ ಲೆಕ್ಕಾಚಾರ ಹಾಕುತ್ತಿದೆ.
ಬೆಳಗಾವಿ ಉಪಚುನಾವಣೆ ಸ್ಪರ್ಧೆಯ ಬಗ್ಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಒಂದು ವೇಳೆ ಹೈಕಮಾಂಡ್ ಹೇಳಿದರೆ ಸ್ಪರ್ಧೆಗೆ ಸಿದ್ದ ಎಂದಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ ಚಲೋ ಹಿಂದೆ ‘ಕೆಪಿಸಿಸಿ ಅಘೋಷಿತ ಅಧ್ಯಕ್ಷೆ ಮಹಾನಾಯಕಿ’ಯ ಕೈವಾಡ: ಬಿಜೆಪಿ
ಅಭ್ಯರ್ಥಿ ಸಂಬಂಧ ಈಗಾಗಲೇ ಮೂರ್ನಾಲ್ಕು ಜನರ ಹೆಸರು ಚಾಲ್ತಿಯಲ್ಲಿದೆ. ಇದರಲ್ಲಿ ನಾನು ಒಬ್ಬನಾಗಿರುವೆ. ಈ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಎರಡು ಮೂರು ದಿನದಲ್ಲಿ ಎಲ್ಲಾ ಗೊತ್ತಾಗುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ ಲೋಕಸಭೆ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಎಪ್ರಿಲ್ 17ರಂದು ಮತದಾನ ನಡೆಯಲಿದೆ. ಮೇ.2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಇದನ್ನೂ ಓದಿ: ಜಿಟಿಡಿಗೆ ನನ್ನ ಮೇಲೆ ಏಕಿಷ್ಟು ದ್ವೇಷ?: ಸಾರಾ ಕಣ್ಣೀರು