Advertisement
ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಜನಪ್ರತಿನಿಧಿಯಾಗಿ ಜನರ ಸೇವೆಯನ್ನು ಮಾಡುತ್ತಾ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ನಾಯಕನಾಗಿ ಸೇವೆ ಸಲ್ಲಿಸಿದ್ದೇನೆ. 1988 ರಲ್ಲಿ ವಿಧಾನಪರಿಷತ್ ಸದಸ್ಯನಾಗಿ ಕೆಲಸ ಮಾಡಿದ ಅನುಭವ ನನಗಿದೆ. ಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕೆಂದು ಜನರು ನನ್ನ ಬಳಿ ಕೇಳಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ , ಸತೀಶ್ ಜಾರಕಿಹೊಳಿ ಮತ್ತು ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಸೇರಿದಂತೆ ಕಾಂಗ್ರೆಸ್ ಮುಖಂಡರು ನನಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಪ್ರವಾಹ ಸಂದರ್ಭದಲ್ಲಿ ಹಾನಿಯಾದ ಮನೆಗಳಿಗೆ ಸಮರ್ಪಕ ಪರಿಹಾರ ನೀಡಬೇಕು. ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಬಾರದೆಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿದ್ದು, ಮನೆ ಹಾನಿಯಾದವರಿಗೆ ಸಮರ್ಪಕ ಪರಿಹಾರ ನೀಡಲಾಗುತ್ತದೆಂದು ಜಿಲ್ಲಾಧಿಕಾರಿಗಳು ಸ್ಪಷ್ಟವಾಗಿ ಭರವಸೆ ನೀಡಿದ್ದಾರೆ ಎಂದು ಪ್ರಕಾಶ ಹುಕ್ಕೇರಿ ತಿಳಿಸಿದರು.