Advertisement

ಅವಿಶ್ವಾಸ ಎದುರಿಸಲು ಸಿದ್ಧ: ಡಾ.ಜಿ.ಪರಮೇಶ್ವರ್‌

02:02 AM Feb 02, 2019 | |

ಬೆಂಗಳೂರು: ಬಜೆಟ್ ಅಧಿವೇಶನದ ಸಂದರ್ಭ ದಲ್ಲಿ ಬಿಜೆಪಿಯವರು ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದನ್ನು ಎದುರಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡೂ ಪಕ್ಷಗಳು ಸೇರಿ ಬಿಜೆಪಿಯ ತಂತ್ರವನ್ನು ವಿಫ‌ಲಗೊಳಿಸುತ್ತೇವೆ. ಅವರು ಅವಿಶ್ವಾಸ ನಿರ್ಣಯ ಮಂಡಿಸಿದರೂ ಯಾವುದೇ ಭಯ ಇಲ್ಲ ಎಂದು ತಿಳಿಸಿದರು. ಸಮ್ಮಿಶ್ರ ಸರ್ಕಾರದಲ್ಲಿ ದೋಸ್ತಿ ಪಕ್ಷಗಳ ನಡುವೆ ಇರುವ ಸಣ್ಣ ಪುಟ್ಟ ಸಮಸ್ಯೆಗಳ ಪರಿಹಾರಕ್ಕೆ ಫೆ.6 ರಂದು ಜಂಟಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next