Advertisement

ಸೆಮಿಕಂಡಕ್ಟರ್‌ ಉದ್ಯಮಕ್ಕೆ ಶೇ.20 ಸಬ್ಸಿಡಿ ನೀಡಲು ಸಿದ್ಧ: ಸಚಿವ ಎಂ.ಬಿ. ಪಾಟೀಲ್‌

08:57 PM Jun 19, 2024 | Team Udayavani |

ಬೆಂಗಳೂರು: ಸೆಮಿಕಂಡಕ್ಟರ್‌ ಉದ್ಯಮದ ಬೆಳವಣಿಗೆಗೆ ಗುಜರಾತ್‌ ರಾಜ್ಯಕ್ಕೆ ಕೊಟ್ಟಿರುವಂತೆ ಶೇ.50ರಷ್ಟು ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುವುದಾದರೆ ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ಶೇ.20ರಷ್ಟು ಸಬ್ಸಿಡಿ ಕೊಡಲು ಸಿದ್ಧ ಇದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

Advertisement

ಗುಜರಾತಿನಲ್ಲಿ ನೆಲೆಯೂರಲಿರುವ ಅಮೆರಿಕದ ಮೈಕ್ರಾನ್‌ ಕಂಪನಿಗೆ ಕೇಂದ್ರ ಸರ್ಕಾರವು ಶೇ.50ರಷ್ಟು ಸಬ್ಸಿಡಿ ಕೊಟ್ಟಿದೆ. ಇದರ ಜತೆಗೆ ಗುಜರಾತ್‌ ಸರ್ಕಾರ ಸಬ್ಸಿಡಿ ಕೊಟ್ಟಿದೆ. ಈ ಸಬ್ಸಿಡಿಯನ್ನು ರಾಜ್ಯ ಸರ್ಕಾರ ಕೊಡುತ್ತದೆಯೇ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮಾಡಿದ್ದ ಪ್ರಶ್ನೆಗೆ ಎಂ.ಬಿ. ಪಾಟೀಲ್‌ ಉತ್ತರಿಸಿದ್ದಾರೆ.

ಇದಕ್ಕೆ ಎ ಕ್ಸ್ ಜಾಲತಾಣದಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿರುವ ಸಚಿವ ಪಾಟೀಲ್‌, ‘ಗುಜರಾತಿಗೆ ಕೊಟ್ಟ ಹಾಗೆ ಮೊದಲು ಸಬ್ಸಿಡಿ ಕೊಡಿ. ನಂತರ ರಾಜ್ಯದ ಪಾಲಿನ ಶೇ. 20ರಷ್ಟು ಸಬ್ಸಿಡಿ ನೀಡುತ್ತೇವೆ. ಈ ಭರವಸೆಯಿಂದ ಕುಮಾರಸ್ವಾಮಿ ಹಿಂದೆ ಸರಿಯುವುದಿಲ್ಲ ಎನ್ನುವ ವಿಶ್ವಾಸ ಕೂಡ ಇದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಉದ್ದಿಮೆ ಇರಲಿ, ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಿಗೂ ಸಮಾನ ನೀತಿ ಅನುಸರಿಸಬೇಕು ಎನ್ನುವುದು ಕರ್ನಾಟಕದ ಪ್ರತಿಪಾದನೆಯಾಗಿದೆ. ಇದು ಸಹಜನ್ಯಾಯದ ತತ್ತ್ವವಾಗಿದ್ದು, ಇದನ್ನು ಕುಮಾರಸ್ವಾಮಿ ಅವರು ಅರ್ಥ ಮಾಡಿಕೊಂಡಿದ್ದಾರೆ ಎಂದು ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ಗುಜರಾತ್‌ ಪರ ಧೋರಣೆ:
ರಾಜ್ಯ ಸರ್ಕಾರವು ಉದ್ಯಮಸ್ನೇಹಿ ನೀತಿಗಳನ್ನು ಅನುಸರಿಸುತ್ತಿದೆ. ಆದರೆ, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರಣದಿಂದಾಗಿ ಗುಜರಾತ್‌ ಪರ ಧೋರಣೆ ತೋರಿಸುತ್ತಿದೆ. ನಾವು ಇದನ್ನಷ್ಟೇ ಪ್ರಶ್ನೆ ಮಾಡುತ್ತಿದ್ದೇವೆ ಎಂದು ಅವರು ವಿವರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next