Advertisement
ದೆಹಲಿ ಭೇಟಿಯ ಮುಖ್ಯ ಉದ್ದೇಶ ಹೆಚ್ಚುವರಿ ಲಸಿಕೆ ಪಡೆಯುವುದಾಗಿದ್ದು, ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ಅವರ ಭರವಸೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
Related Articles
Advertisement
ಪಿಯೂಷ್ ಗೋಯಲ್ ಅವರು ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಅಂತರರಾಷ್ಟ್ರೀಯ ಮಟ್ಟದ ಕಂಪೆನಿಗಳ ಜೊತೆ ಸಂಪರ್ಕ ಒದಗಿಸುವುದಾಗಿ ತಿಳಿದ್ದಾರೆ. ಇದು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ದೊರೆಯಲು ಸಾಧ್ಯವಾಗುತ್ತದೆ. ವಿಶೇಷವಾಗಿ ಹೆಣ್ಣುಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಇನ್ನು, ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರತಿಕ್ರಿಯಿಸಿದ ಅವರು, ತನಿಖೆಗೆ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ನಡೆಯುತ್ತಿದೆ. ನನಗೇ ನೇರವಾಗಿ ವರದಿ ಮಾಡಿ ಎಂದು ತಿಳಿಸಿದ್ದೇನೆ. ಡಿಜಿಪಿ ಅವರು ಇಂದು ಸ್ವತಃ ಮೈಸೂರಿಗೆ ಭೇಟಿ ನೀಡಿದ್ದಾರೆ. ಡಿಜಿಪಿ ಅವರೇ ಖುದ್ದು ಈ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸುವಂತೆ ತಿಳಿಸಿದ್ದೇನೆ. ಶೀಘ್ರದಲ್ಲೇ ಪ್ರಕರಣ ಭೇದಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.
ಗೌರಿ-ಗಣೇಶ ಹಬ್ಬ ಆಚರಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿಗಳನ್ನು ರೂಪಿಸುವ ಕುರಿತು ಆಗಸ್ಟ್ 30 ರಂದು ನಡೆಯಲಿರುವ ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದಿದ್ದಾರೆ.
ಜೆ.ಪಿ ನಡ್ಡಾ ಅವರೊಂದಿಗೆ ಮುಂದೆ ಚರ್ಚೆ ಮಾಡ್ತೇನೆ : ಸಿಎಂ
ಸಚಿವ ಸಂಪುಟದಲ್ಲಿನ ಖಾಲಿ ಸ್ಥಾನ ಭರ್ತಿ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರನ್ನು ಬೇರೆ ಬೇರೆ ಕಾರಣಗಳಿಂದ ಭೇಟಿ ಮಾಡಲು ಆಗಲಿಲ್ಲ. ಮುಂದಿನ ಬಾರಿ ನವದೆಹಲಿಗೆ ತೆರಳಿದಾಗ ಆ ಬಗ್ಗೆ ಅವರೊಂದಿಗೆ ಚರ್ಚೆ ಮಾಡುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ : ‘ಹೀಗೆ ಬಂದು ಹಾಗೆ ಹೋದ್ರು’..: ಐದು ನಿಮಿಷಕ್ಕೆ ಸೀಮಿತವಾಯ್ತು ಗೃಹ ಸಚಿವರ ಘಟನಾ ಸ್ಥಳ ಭೇಟಿ