Advertisement
ನಗರದಲ್ಲಿ ಶನಿವಾರ ಲೋಕೋಪಯೋಗಿ ಇಲಾಖೆಯ ಭವನ, ಮೇಲ್ಸೇತುವೆಗಳು, ವಿವಿಧ ವಸತಿ ಶಾಲೆಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಹೆಚ್ಚಿನ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ಇದಕ್ಕಾಗಿ ಅಧಿಕ ಅನುದಾನವನ್ನೂ ನೀಡಲಾಗುವುದು ಎಂದು ಭರವಸೆ ನೀಡಿದರು.
Related Articles
Advertisement
ಇದನ್ನೂ ಓದಿ:ಕೃಷಿ ವಲಯವೇ ರಾಜ್ಯದ ಮೊದಲ ಆದ್ಯತೆ: ಸಿಎಂ ಯಡಿಯೂರಪ್ಪ
ಕೋವಿಡ್ ಕಾರಣ ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಕುಲ ಕಸಬುದಾರರು ಮತ್ತು ವಿವಿಧ ವರ್ಗದ ಕಾರ್ಮಿಕರು, ರೈತರ ನೆರವಿಗೆ ಮುಖ್ಯಮಂತ್ರಿಗಳು ಬಂದಿದ್ದಾರೆ. ಮೊದಲ ಬಾರಿಗೆ 2,281 ಕೋಟಿ ಮೊತ್ತದ ಪ್ಯಾಕೇಜ್ ನೀಡಿದ್ದರು. ಈಗ ಎರಡನೇ ಅಲೆ ಸಂದರ್ಭದಲ್ಲೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಪ್ರತಿ ಒಂದು ರೂಪಾಯಿ ಕೂಡ ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯ ಕೂಡ ಫಲಾನುಭವಿಗಳಿಗೆ ನೇರವಾಗಿ ಸರ್ಕಾರಿ ಸವಲತ್ತು ಸೇರಿಬೇಕು ಎಂಬುದೇ ಆಗಿದೆ. ಆಡಳಿತದಲ್ಲಿ ಇಂತಹದೊಂದು ಬದಲಾವಣೆಯನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರು ತಂದಿದ್ದಾರೆ ಎಂದು ವಿವರಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಸಚಿವ ಬಿ.ಶ್ರೀರಾಮುಲು, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿದರು.
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ, ಸಂಸದ ಡಾ. ಉಮೇಶ ಜಾಧವ, ಶಾಸಕರಾದ ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ.ಅವಿನಾಶ ಉಮೇಶ ಜಾಧವ, ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ವಲ್ಲ್ಯಾಪುರೆ, ಶಶೀಲ ನಮೋಶಿ, ಬಿ.ಜಿ.ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಭೀಮರಾಯನಗುಡಿ ಅಚ್ಟುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.