Advertisement

Belthangady; ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

11:21 PM Jan 06, 2025 | Team Udayavani |

ಬೆಳ್ತಂಗಡಿ: ಜಿಲ್ಲೆಯಲ್ಲಿ ನೂರಾರು ಅಕ್ರಮ ಕಸಾಯಿಖಾನೆಗಳು ಕಾರ್ಯನಿರ್ವ ಹಿಸುತ್ತಿದ್ದರೂ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ. ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದನ್ನು ಎಂದಿಗೂ ಸಹಿಸುವುದಿಲ್ಲ ಎಂದು ವಿಹಿಂಪ ಮಂಗಳೂರು ವಿಭಾಗದ ಸಂಯೋಜಕ ಪುನೀತ್‌ ಅತ್ತಾವರ ಹೇಳಿದರು.

Advertisement

ತಾಲೂಕಿನ ಚಾರ್ಮಾಡಿ ಬಳಿ ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಜ.6ರಂದು ಕಕ್ಕಿಂಜೆಯಲ್ಲಿ ನಡೆದ ಬೃಹತ್‌ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದರು.

ಅಕ್ರಮ ಕಸಾಯಿಖಾನೆಗಳನ್ನು ನಿಲ್ಲಿಸ ದಿದ್ದರೆ ವಿಹಿಂಪ ಮತ್ತು ಬಜರಂಗ ದಳ ನೇರ ಕಾರ್ಯಾಚರಣೆಗೆ ಇಳಿಯಲಿದೆ. ಇದಕ್ಕೆ ಸರಕಾರ ಮತ್ತು ಪೊಲೀಸ್‌ ಇಲಾಖೆ ಹೊಣೆಯಾಗಲಿದೆ. ಗೋ ರಕ್ಷಣೆಗೆ ಹಿಂದೂ ಸಮಾಜ ಯಾವ ತ್ಯಾಗಕ್ಕೂ ಸಿದ್ಧ ಎಂದರು.

ಐವರ ಬದಲು ಇಬ್ಬರ ಬಂಧನ
ವಿಹಿಂಪ ಜಿಲ್ಲಾ ಕಾರ್ಯದರ್ಶಿ ನವೀನ್‌ ನೆರಿಯ ಮಾತನಾಡಿ, ಚಾರ್ಮಾಡಿ ಪ್ರಕರಣ ದಲ್ಲಿ 5ಕ್ಕಿಂತ ಅಧಿಕ ಮಂದಿ ಭಾಗಿಯಾಗಿರುವ ಮಾಹಿತಿ ಇದೆ. ಆದರೆ ಇಬ್ಬರನ್ನು ಮಾತ್ರ ಬಂಧಿಸಲಾಗಿದೆ. ಉಳಿದವರನ್ನು ತತ್‌ಕ್ಷಣ ಬಂಧಿಸಿ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಬೇಕು. ಕಾಂಗ್ರೆಸ್‌ ಸರಕಾರದ ಆಡಳಿತದಲ್ಲಿ ಪೊಲೀಸ್‌ ಇಲಾಖೆಯ ಕೈಕಟ್ಟಿ ಹಾಕಲಾಗಿದೆ ಎಂದು ಆರೋಪಿಸಿದರು.

ವಿಹಿಂಪ ಬಜರಂಗದಳ ತಾಲೂಕು ಪ್ರಖಂಡ ಅಧ್ಯಕ್ಷ ದಿನೇಶ್‌ ಚಾರ್ಮಾಡಿ, ತಾಲೂಕು ಸಂಯೋಜಕ ಸಂತೋಷ್‌ ಅತ್ತಾಜೆ, ಗೋ ರಕ್ಷಕ ರಮೇಶ ಧರ್ಮಸ್ಥಳ ಉಪಸ್ಥಿತರಿದ್ದರು.

Advertisement

ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್‌ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್‌ ಅಧ್ಯಕ್ಷ ಅಖೀಲ್‌ ರೆಖ್ಯ ಸ್ವಾಗತಿಸಿದರು.

ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಚಾರ್ಮಾಡಿ ಪಂಚಾಯತ್‌ ಮೂಲಕ ಪೊಲೀಸರು ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನ ಸ್ಥಳಕ್ಕೆ ಆಗಮಿಸಿದ ಶಾಸಕ ಹರೀಶ್‌ ಪೂಂಜ ಮಾತನಾಡಿ, ಹಿಂದೂ ಸಮಾ ಜದ ಭಾವನೆಗಳನ್ನು ಅರ್ಥ ಮಾಡಿ ಕೊಂಡು ಗೋಹತ್ಯೆ ನಿಷೇಧ ಕಾನೂನುಗಳನ್ನು ಜಾರಿಗೆ ತರಬೇಕು. ಲವ್‌ ಜೆಹಾದ್‌, ಲ್ಯಾಂಡ್‌ ಜೆಹಾದ್‌, ಭಯೋತ್ಪಾದನೆ, ಗೋ ಹತ್ಯೆ ಮೂಲಕ ಹಿಂದೂಗಳ ಭಾವನೆಗಳಿಗೆ ಘಾಸಿ ಉಂಟು ಮಾಡುವುದಕ್ಕೆ ಕಡಿವಾಣ ಬೀಳಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next