Advertisement
ಗುರುವಾರ ವರ್ಚುವಲ್ ವ್ಯವಸ್ಥೆ ಮೂಲಕ ಸಭೆ ನಡೆಸಿದ ಅವರು, ಜಿಲ್ಲೆಯ ಮಳೆ ಪರಿಸ್ಥಿತಿ ಅವಲೋಕಿಸಿ ಹಾಗೂ ಪ್ರಗತಿ ಪರಿಶೀಲನೆ ಮಾಡಿದರು.
Related Articles
Advertisement
ತಗ್ಗುಪ್ರದೇಶದಲ್ಲಿರುವ ಸೇತುವೆ :
ಗಳು ಮುಳುಗಡೆಗೊಂಡ ಸಂದರ್ಭ ದಲ್ಲಿ ಸಂಚಾರ ವ್ಯವಸ್ಥೆಯನ್ನು ಸ್ಥಗಿತಗೊಳಿಸುವ ಕಾರ್ಯವನ್ನು ಪೊಲೀಸ್ ಹಾಗೂ ಲೋಕೋ ಪಯೋಗಿ ಇಲಾಖೆ ಅಧಿಕಾರಿಗಳು ನಿರ್ವಹಿಸಬೇಕು ಎಂದರು.
ಶೀಘ್ರ ಪರಿಹಾರ :
ಮಳೆಯಿಂದ ಮನೆ, ಜಾನುವಾರು, ಆಸ್ತಿ ಮೊದಲಾದ ಹಾನಿಗಳಿಗೆ ನಷ್ಟ ಪರಿಹಾರವನ್ನು ಎನ್‌ಡಿಆರ್‌ಎಫ್ ನಿಯಮಾವಳಿಯಂತೆ ಶೀಘ್ರ ತಲುಪಿಸಬೇಕು. ಕಿಂಡಿ ಅಣೆಕಟ್ಟುಗಳ ಹಲಗೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಜಿಲ್ಲಾ ವಿಪತ್ತು ನಿರ್ವಹಣೆ ಕಂಟ್ರೋಲ್ ರೂಂ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಿ, ತುರ್ತು ಕರೆ ಬಂದಾಗ ತತ್‌ಕ್ಷಣವೇ ಸ್ಪಂದಿಸಬೇಕು. ಜಿಲ್ಲೆ ಯಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ರೈತರಿಗೆ ಅಗತ್ಯ ವಿರುವ ಬಿತ್ತನೆ ಬೀಜ, ರಸಗೊಬ್ಬರಗಳ ವಿತರಣೆ ಸಮರ್ಪಕವಾಗಿ ಮಾಡಬೇಕು ಸೂಚಿಸಿದರು.
ಜಿಲ್ಲಾಧಿಕಾರಿ ಸೂಚನೆ :
ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮಾತನಾಡಿ, ಜಿಲ್ಲೆಯಲ್ಲಿ ಮಳೆಯಿಂದ ಅಪಾಯಕ್ಕೆ ಒಳಗಾಗುವ ಸಂಭವವಿರುವ ಅಂಗನವಾಡಿ, ಶಾಲಾ ಕಾಲೇಜು ಕಟ್ಟಡಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸಂಬಂಧಪಟ್ಟ ಇಲಾಖೆಗಳು ಕೈಗೊಳ್ಳಬೇಕು ಎಂದು ಸೂಚಿಸಿದರು.
ಪ್ರಸಕ್ತ ಮಳೆಗಾಲ ಮುಗಿಯುವ ವರೆಗೂ ತಾಲೂಕು ಹಾಗೂ ಗ್ರಾಮ ಮಟ್ಟದ ಪ್ರಾಕೃತಿಕ ವಿಕೋಪ ನಿರ್ವಹಣ ಸಮಿತಿಗಳು 15 ದಿನಗಳಿಗೊಮ್ಮ ಸಭೆ ನಡೆಸಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ವಿಕೋಪ ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೆಕರ್, ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.