Advertisement

ಉಡುಪಿ: ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸನ್ನದ್ಧರಾಗಿ: ಮನೋಜ್‌ ಜೈನ್‌

11:26 PM Jun 30, 2022 | Team Udayavani |

ಉಡುಪಿ: ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಅತಿವೃಷ್ಟಿ ಉಂಟಾಗಿ ಸಮಸ್ಯೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿರಬೇಕು ಎಂದು ಜಿಲ್ಲಾ  ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌ ಸೂಚನೆ ಅವರು ನೀಡಿದರು.

Advertisement

ಗುರುವಾರ ವರ್ಚುವಲ್‌ ವ್ಯವಸ್ಥೆ ಮೂಲಕ ಸಭೆ ನಡೆಸಿದ ಅವರು, ಜಿಲ್ಲೆಯ ಮಳೆ ಪರಿಸ್ಥಿತಿ ಅವಲೋಕಿಸಿ ಹಾಗೂ ಪ್ರಗತಿ ಪರಿಶೀಲನೆ ಮಾಡಿದರು.

ಕಾಳಜಿ ಕೇಂದ್ರ ತೆರೆಯಿರಿ :

ನಿರಂತರ ಮಳೆಯಿಂದ ನದಿ, ಹಳ್ಳಗಳು ತುಂಬಿ ಹರಿದು ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಅಂತಹ ಪ್ರದೇಶಗಳನ್ನು ಈಗಾಗಲೇ ಗುರುತಿಸಿದ್ದು ಅಲ್ಲಿ ವಾಸಿಸುವ ಜನರಿಗೆ ರಕ್ಷಣೆ ಮತ್ತು ಸ್ಥಳಾಂತರಕ್ಕೆ ಕಾಳಜಿ ಕೇಂದ್ರಗಳನ್ನು ತೆರೆಯಲು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಮಳೆಗಾಳಿಯಿಂದ ರಸ್ತೆಗಳಲ್ಲಿ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತ ವಾಗದಂತೆ ಕ್ರಮ ಕೈಗೊಳ್ಳಲು ಅಗತ್ಯ ಪರಿಕರಗಳೊಂದಿಗೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಿದ್ಧರಿರಬೇಕು ಎಂದರು.

Advertisement

ತಗ್ಗುಪ್ರದೇಶದಲ್ಲಿರುವ ಸೇತುವೆ :

ಗಳು ಮುಳುಗಡೆಗೊಂಡ ಸಂದರ್ಭ ದಲ್ಲಿ ಸಂಚಾರ ವ್ಯವಸ್ಥೆಯನ್ನು ಸ್ಥಗಿತಗೊಳಿಸುವ ಕಾರ್ಯವನ್ನು ಪೊಲೀಸ್‌ ಹಾಗೂ ಲೋಕೋ ಪಯೋಗಿ ಇಲಾಖೆ ಅಧಿಕಾರಿಗಳು ನಿರ್ವಹಿಸಬೇಕು ಎಂದರು.

ಶೀಘ್ರ ಪರಿಹಾರ :

ಮಳೆಯಿಂದ ಮನೆ, ಜಾನುವಾರು, ಆಸ್ತಿ ಮೊದಲಾದ ಹಾನಿಗಳಿಗೆ ನಷ್ಟ ಪರಿಹಾರವನ್ನು ಎನ್‌ಡಿಆರ್‌ಎಫ್‌ ನಿಯಮಾವಳಿಯಂತೆ ಶೀಘ್ರ ತಲುಪಿಸಬೇಕು. ಕಿಂಡಿ ಅಣೆಕಟ್ಟುಗಳ ಹಲಗೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಜಿಲ್ಲಾ ವಿಪತ್ತು ನಿರ್ವಹಣೆ ಕಂಟ್ರೋಲ್‌ ರೂಂ ದಿನದ 24 ಗಂಟೆಯೂ ಕಾರ್ಯ  ನಿರ್ವಹಿಸಿ, ತುರ್ತು ಕರೆ ಬಂದಾಗ ತತ್‌ಕ್ಷಣವೇ ಸ್ಪಂದಿಸಬೇಕು. ಜಿಲ್ಲೆ ಯಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ರೈತರಿಗೆ ಅಗತ್ಯ ವಿರುವ ಬಿತ್ತನೆ ಬೀಜ, ರಸಗೊಬ್ಬರಗಳ ವಿತರಣೆ ಸಮರ್ಪಕವಾಗಿ ಮಾಡಬೇಕು ಸೂಚಿಸಿದರು.

ಜಿಲ್ಲಾಧಿಕಾರಿ ಸೂಚನೆ :

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಮಾತನಾಡಿ, ಜಿಲ್ಲೆಯಲ್ಲಿ ಮಳೆಯಿಂದ ಅಪಾಯಕ್ಕೆ ಒಳಗಾಗುವ ಸಂಭವವಿರುವ ಅಂಗನವಾಡಿ, ಶಾಲಾ ಕಾಲೇಜು ಕಟ್ಟಡಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸಂಬಂಧಪಟ್ಟ ಇಲಾಖೆಗಳು ಕೈಗೊಳ್ಳಬೇಕು ಎಂದು ಸೂಚಿಸಿದರು.

ಪ್ರಸಕ್ತ ಮಳೆಗಾಲ ಮುಗಿಯುವ ವರೆಗೂ ತಾಲೂಕು ಹಾಗೂ ಗ್ರಾಮ ಮಟ್ಟದ ಪ್ರಾಕೃತಿಕ ವಿಕೋಪ ನಿರ್ವಹಣ ಸಮಿತಿಗಳು 15 ದಿನಗಳಿಗೊಮ್ಮ ಸಭೆ ನಡೆಸಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ವಿಕೋಪ ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌., ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಕಿರಣ್‌ ಪೆಡ್ನೆಕರ್‌, ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next