ಬೆಂಗಳೂರು: ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ತಮ್ಮ ಪಕ್ಷ ಸೋತರೆ ಹೊಣೆ ಹೊರಲು ಸಿದ್ಧ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಇಂಡಿಯಾ ಟುಡೇ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಸೋತರೆ ನಾನು ಯಾವುದೇ ಹೊಣೆ ಹೊರಲು ಸಿದ್ಧ, ಆದರೆ ಕಾಂಗ್ರೆಸ್ ಗೆಲ್ಲಬೇಕು’ ಎಂದು ಹೇಳಿದ್ದಾರೆ.
ಈ ಬಾರಿ ನಮಗೆ ಸ್ಪಷ್ಟ ಬಹುಮತ ಸಿಗಲಿದೆ. ನಾವು ಸ್ಥಿರ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಶರದ್ ಪವಾರ್: ಎನ್‌ಸಿಪಿ ಅಧ್ಯಕ್ಷರಾಗಿ ಮುಂದುವರಿಕೆ
ತಾವು ಸತತ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುತ್ತಿರುವ ಬಗ್ಗೆ ಮಾತನಾಡಿದ ಖರ್ಗೆ, “ಇಚ್ಛಾಶಕ್ತಿ ಮತ್ತು ಬದ್ಧತೆ ಇರಬೇಕು. ನಾನು ಪ್ರತಿನಿತ್ಯ ನಾಲ್ಕು ಸಭೆಗಳನ್ನು ನಡೆಸುತ್ತೇನೆ. ಕೆಲವೊಮ್ಮೆ ಸಂಜೆಯ ಸಭೆಗೆ ಹಾಜರಾಗಲು ನಾನು 100 ಕಿಲೋಮೀಟರ್ ಪ್ರಯಾಣಿಸಬೇಕಾಗುತ್ತದೆ. ನಾವು ಬಿಜೆಪಿಯನ್ನು ಸೋಲಿಸಲು ನಿರ್ಧರಿಸಿದ್ದೇವೆ ಆದ್ದರಿಂದ ನಾವು ಎಲ್ಲವನ್ನೂ ಸಹಿಸಿಕೊಳ್ಳಬೇಕು” ಎಂದು ಹೇಳಿದರು.