Advertisement

ಕಡ್ಡಾಯ ಮತದಾನ ಮಾಡಿ ಪ್ರಜಾಪ್ರಭುತ್ವ ರಕ್ಷಿಸಿ

05:29 AM Jan 26, 2019 | |

ದೇವನಹಳ್ಳಿ: ಚುನಾವಣೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದ್ದು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿದಾಗ ಮಾತ್ರ ಉತ್ತಮ ಆಡಳಿತ ಮಾಡುವ ನಾಯಕರು ಆಯ್ಕೆ ಯಾಗಿ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಜಿಪಂ ಸಿಇಒ, ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಆರ್‌.ಲತಾ ತಿಳಿಸಿದರು.

Advertisement

ನಗರದ ಗಿರಿಯಮ್ಮ ವೃತ್ತದಲ್ಲಿರುವ ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಡಳಿತ, ಜಿಪಂ, ಕರ್ನಾಟಕ ಚುನಾವಣಾ ಆಯೋಗ ಏರ್ಪಡಿಸಿದ್ದ ‘ರೆಡಿ ಟು ವೋಟ್ ಮ್ಯಾರಥಾನ್‌’ ಹಾಗೂ ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅವ ರು ಮಾತನಾಡಿದರು.

1959 ರಲ್ಲಿ ಚುನಾವಣಾ ಆಯೋಗ ಪ್ರಾರಂಭವಾದ ನಂತರ ಇದು 9 ನೇ ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆಯಾಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಮತದಾನದ ಅರಿವು ಮೂಡಿಸಲಾಗುತ್ತಿದೆ. ಪ್ರತಿ ಅಂಗವಿಕಲರನ್ನು ಗುರುತಿಸಿ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರಿಸಲಾಗು ವುದು. ಯಾರದೇ ಹೆಸರು ತಪ್ಪಿ ಹೋಗಿದ್ದಲ್ಲಿ ಅಂತಹವರನ್ನು ಗುರುತಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ಮ್ಯಾರಥಾನ್‌ ಮೂಲಕ ಅರಿವು: ಹಿರಿಯ ನಾಗರಿಕರನ್ನೂ ಗುರುತಿಸುತ್ತಿದ್ದೇವೆ. ಶೇ. 100 ಮತದಾನವಾಗಲು ಅಭಿ ಯಾನ ಮಾಡುತ್ತಿದ್ದೇವೆ. ಕಾಟಾಚಾರಕ್ಕೆ ಮತದಾನ ಮಾಡಿದರೆ ಸಾಲದು. ಉತ್ತಮ ನಿರ್ಧಾರ ಕೈಗೊಂಡು ಉತ್ತಮ ಸಮಾಜ ನಿರ್ಮಾಣ ಮಾಡಲು ತಮ್ಮ ಜವಾಬ್ದಾರಿ ದೊಡ್ಡ ದಾಗಿದೆ ಎಂದು ಹೇಳಿದರು.

ಅಂಗವಿಕಲರ ತ್ರಿಚಕ್ರ ವಾಹನ ಹಾಗೂ ಶಾಲಾ ಮಕ್ಕಳೊಂದಿಗೆ ನಗರದ ಮುಖ್ಯ ಬೀದಿಗಳಲ್ಲಿ ಮ್ಯಾರಥಾನ್‌ ಮಾಡಿ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬರೂ ಮತದಾನದ ಹಕ್ಕನ್ನು ಪಡೆಯಬೇಕು. ನಿರ್ಭಯವಾಗಿ ಶಾಂತಿಯುತ ಮತದಾನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಮಹಿಳೆಯರು 4 ಗೋಡೆಗಳಿಗೆ ಸೀಮಿತವಾಗದೇ ತಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕೆಂದು ಹೇಳಿದರು.

Advertisement

ಸ್ವ ಇಚ್ಛೆಯಿಂದ ಮತದಾನ ಮಾಡಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್‌ ಹೊಸಮನಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿ ಯುತ ಚುನಾವಣೆಯ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡ ಬೇಕು. 18 ವರ್ಷ ತುಂಬಿದ ಭಾರತೀಯ ಪ್ರಜೆ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದರು.

ಶೇ.50, 60 ಮಾತ್ರ ಮತದಾನವಾಗು ತ್ತಿದೆ. ಎಷ್ಟೇ ಅರಿವು ಮೂಡಿಸಿದರೂ ಶೇಕ ಡಾವಾರು ಮತದಾನವಾಗುತ್ತಿಲ್ಲ. ಮತ ದಾನದ ದಿನ ರಜೆ ಇದೆ ಎಂಬ ಕಾರಣಕ್ಕಾಗಿ ಪ್ರವಾಸ ಹೋಗುತ್ತಾರೆ. ಆ ರೀತಿ ಮಾಡ ಬಾರದು. ಸ್ವ ಇಚ್ಛೆಯಿಂದ ಮತದಾನ ಮಾಡಬೇಕು ಎಂದು ಹೇಳಿದರು.

ಹಕ್ಕು ಚಲಾಯಿಸಿ: ಅಧ್ಯಕ್ಷತೆ ವಹಿಸಿ ಮಾತ ನಾಡಿದ ಜಿಲ್ಲಾಧಿಕಾರಿ ಕರೀಗೌಡ, ಯಾವು ದೇ ಮತದಾರರು ಮತದಾನದಿಂದ ದೂರ ಉಳಿಯಬಾರದು. ತಮ್ಮ ಹಕ್ಕನ್ನು ಚಲಾಯಿಸಬೇಕು. ಎಲ್ಲರೂ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ಅಭಿವೃದ್ಧಿ ಕಡೆ ಹೋಗಲು ಸಾಧ್ಯವಾಗುತ್ತದೆ. ನಮ್ಮ ಹಕ್ಕುಗಳು ಹಾಗೂ ದೇಶ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. 5 ವರ್ಷಕ್ಕೊಮ್ಮೆ ಲೋಕಸಭಾ, ವಿಧಾನಸಭಾ ಹೀಗೆ ಇತರೆ ಚುನಾವಣೆಗಳು ಬರುತ್ತವೆ. ಮತದಾನ ಮಾಡಲು ಸ್ವಇಚ್ಛೆಯಿಂದ ಮುಂದೆ ಬರಬೇಕೆಂದು ತಿಳಿಸಿದರು.

ಜಿಪಂ ಮುಖ್ಯ ಲೆಕ್ಕಾಧಿಕಾರಿ ಶೋಭಾ, ಡಿಡಿಪಿಐ ಕೃಷ್ಣ ಮೂರ್ತಿ, ತಹಶೀ ಲ್ದಾರ್‌ ರಾಜಣ್ಣ, ತಾಪಂ ಇಒ ಮುರು ಡಯ್ಯ, ಬಿಇಒ ಗಾಯತ್ರಿ ದೇವಿ, ಪುರಸಭಾ ಮುಖ್ಯಾಧಿಕಾರಿ ಹನಮಂತೇಗೌಡ, ವಿಜ ಯಪುರ ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್‌ ಮುಂತಾದವರಿದ್ದರು.ಕಾರ್ಯಕ್ರಮಕ್ಕೂ ಮುನ್ನಾ ನಗರದ ಪ್ರಮುಖ ಬೀದಿಗಳಲ್ಲಿ ‘ರೆಡಿ ಟು ವೋಟ್ ಮ್ಯಾರ ಥಾನ್‌’ ಹಾಗೂ ವಿಕಲಚೇತನರ ತ್ರಿಚಕ್ರ ವಾಹನಗಳ ಮೂಲಕ ಜಾಗೃತಿ ಮೆರವಣಿಗೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next