Advertisement

ರಿಯಲ್‌ ಎಸ್ಟೇಟ್‌ ಉದ್ಯಮಿ ಅರ್ಜಿ ವಜಾ

12:26 PM Dec 11, 2018 | |

ಬೆಂಗಳೂರು: ಆ್ಯಂಬಿಡೆಂಟ್‌ ವಂಚನೆ ಪ್ರಕರಣ ಸಂಬಂಧ ಬಂಧನಕ್ಕೂ ಮುನ್ನ ಸುಪ್ರೀಂಕೋರ್ಟ್‌ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಿಸಿಬಿಗೆ ನಿರ್ದೇಶನ ನೀಡುವಂತೆ ಕೋರಿ ರಿಯಲ್‌ ಎಸ್ಟೇಟ್‌ ಉದ್ಯಮಿ ವಿಜಯ್‌ ಟಾಟಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.

Advertisement

ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ನಡೆಸಿತು. ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು ತನಿಖಾಧಿಕಾರಿಗಳು ನಿಯಮಗಳನ್ನು ಪಾಲಿಸುತ್ತಿಲ್ಲ. ಅರ್ಜಿದಾರರಿಗೆ ಹಣದ ಬೇಡಿಕೆ ಇಟ್ಟಿದ್ದಾರೆ, ಇಲ್ಲವಾದರೆ ಕ್ರಮ ಕೈಗೊಳ್ಳುವ ಬೆದರಿಕೆ ಹಾಕಿದ್ದಾರೆ ಎಂದು ದೂರಿದರು.

ಇದಕ್ಕೆ ಆಕ್ಷೇಪಿಸಿದ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌, ವಂಚನೆ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್‌ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸುತ್ತಿದ್ದೇವೆ. ಅದರಲ್ಲಿ ಯಾವುದೇ ಲೋಪವಾಗುತ್ತಿಲ್ಲ . ಅರ್ಜಿದಾರರು ಅನಗತ್ಯ ಆರೋಪ ಮಾಡುತ್ತಿದ್ದಾರೆ. ಅವರ ಆರೋಪಗಳಿಗೆ ಯಾವುದೇ ಆಧಾರವಿಲ್ಲ ಎಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು. ಆ್ಯಂಬಿಡೆಂಟ್‌ ವಂಚನೆ ಪ್ರಕರಣದಲ್ಲಿ ವಿಜಯ್‌ ಟಾಟಾ ಅವರ ವಿರುದ್ಧವೂ ದೂರು ಬಂದಿರುವ ಹಿನ್ನೆಲೆಯಲ್ಲಿ ಸಿಸಿಬಿ ಅವರಿಗೆ ನೋಟಿಸ್‌ ನೀಡಿ ವಿವರಣೆ ಕೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next