Advertisement

ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ : ಅನಿತಾ ಕುಮಾರಸ್ವಾಮಿ

04:09 PM Mar 18, 2023 | Vishnudas Patil |

ಬೆಂಗಳೂರು : ಡಬಲ್ ಎಂಜಿನ್ ಬಿಜೆಪಿ ಸರಕಾರಗಳು, ಈ ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಬೆಳಗಿನಜಾವ ಸುರಿದ ಒಂದು ಸಣ್ಣಮಳೆಗೇ ಅದು ಕೆರೆಯಾಗಿ, ಚರಂಡಿಯಾಗಿ ಉಕ್ಕಿ ಹರಿದಿದೆ ಎಂದು ರಾಮನಗರ ಕ್ಷೇತ್ರದ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

Advertisement

”ಕೆಲ ದಿನಗಳ ಹಿಂದೆ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ವಾಹನದಲ್ಲಿದ್ದ ದಂಪತಿಯ ಹಣ, ಚಿನ್ನಾಭರಣವನ್ನು ದೋಚಿದ್ದ ಪ್ರಕರಣ ವರದಿಯಾಗಿತ್ತು. ಜತೆಗೆ, ನಿರಂತರ ಅಪಘಾತಗಳಿಂದ 80ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಾಗಾದರೆ, ಈ ಹೆದ್ದಾರಿಯ ಭದ್ರತೆ, ಸುರಕ್ಷತೆ ಪಾಡೇನು? ಟೋಲ್ ಸಂಗ್ರಹ ಮಾಡಿದರೆ ಸಾಕೇ?” ಎಂದು ಪ್ರಶ್ನಿಸಿದ್ದಾರೆ.

”ನನ್ನ ಒತ್ತಾಯ ಇಷ್ಟೇ. ಸರ್ವಿಸ್ ರಸ್ತೆಯೂ ಸೇರಿದಂತೆ ಈ ಹೆದ್ದಾರಿಯ ಎಲ್ಲಾ ಬಾಕಿಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅದುವರೆಗೂ ಟೋಲ್ ಸಂಗ್ರಹ ನಿಲ್ಲಿಸಬೇಕು. ಈ ರಸ್ತೆಗಾಗಿ ಭೂಮಿ ಕಳೆದುಕೊಂಡಿರುವ ರಾಮನಗರ, ಮಂಡ್ಯ ಸೇರಿ ಆ ಭಾಗದ ಎಲ್ಲ ಜನರು ಮುಕ್ತವಾಗಿ ಸಂಚರಿಸಲು ಅವಕಾಶ ಮಾಡಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next