Advertisement
ಲಾಹೋರ್ ನಿಂದ ಅಟಾರಿ ವಾಘಾ ಗಡಿಗೆ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕ್ ಅಧಿಕಾರಿಗಳ ಜೊತೆ ಭಾರತೀಯ ವಾಯುಸೇನೆ ಸಲಹೆಗಾರ ಜಿಟಿ ಕುರಿಯನ್ ಕರೆತಂದಿದ್ದು, ಭಾರತೀಯ ಸೇನಾ ವರಿಷ್ಠರಿಗೆ, ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ಅಭಿನಂದನ್ ಪೋಷಕರು ಕೂಡಾ ಹಾಜರಿದ್ದರು.
ಭದ್ರತೆಯ ದೃಷ್ಟಿಯ ಹಿನ್ನೆಲೆಯಲ್ಲಿ ವಾಯಸೇನೆ, ನೌಕಾಸೇನೆ ಹಾಗೂ ಭೂಸೇನಾ ಮುಖ್ಯಸ್ಥರಿಗೆ ಝಡ್ ಪ್ಲಸ್ ಭದ್ರತೆಯನ್ನು ನೀಡಲಾಗಿದೆ. ಭದ್ರತೆಯ ನೆಲೆಯಲ್ಲಿ ವಾಘಾ ಗಡಿಯಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ಜಮಾಯಿಸಿದ್ದ ಸಾರ್ವಜನಿಕರನ್ನು ಸೇನೆ ತೆರವುಗೊಳಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಅಭಿನಂದನ್ ಹಸ್ತಾಂತರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಸೇನೆ ಘೋಷಿಸಿದೆ.
Related Articles
Advertisement
ಭಾರತದ ವಾಯುಸೇನೆ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಭಾರತಕ್ಕೆ ಹಸ್ತಾಂತರಿಬಾರದು ಎಂದು ತಡೆಕೋರಿ ಪಾಕ್ ಸಾಮಾಜಿಕ ಕಾರ್ಯಕರ್ತರು ಪಾಕ್ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಪಿಐಎಲ್ ಅನ್ನು ವಜಾಗೊಳಿಸಿದೆ.