Advertisement

ಸಾವಯವ ತರಕಾರಿಯಲ್ಲಿ ರಿಯಲ್ ಸ್ಟಾರ್ ಯಶಸ್ಸು

04:14 AM Jun 21, 2020 | Lakshmi GovindaRaj |

ಈಗಾಗಲೇ ಹಲವು ನಟ, ನಟಿಯರು ಲಾಕ್‍ಡೌನ್ ಅವಧಿಯಲ್ಲಿ ತಮ್ಮದೇ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ನಟ ಉಪೇಂದ್ರ ಕೃಷಿ ಮಾಡುವುದರಲ್ಲಿ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲ ಕೇವಲ ಎರಡೂವರೆ ತಿಂಗಳಲ್ಲಿ ಉಪ್ಪಿ ತಮ್ಮ ಭೂಮಿಯಲ್ಲಿ ಸಮೃದ್ದ ಬೆಳೆಯನ್ನೂ ತೆಗೆದಿದ್ದಾರೆ. ಹೌದು, ಉಪೇಂದ್ರ ತಮ್ಮ ಹೊಲದಲ್ಲಿ ಸಾವಯವ ಪದ್ಧತಿ ಮೂಲಕ ತರಕಾರಿ, ಹೂವು ಬೆಳೆದಿದ್ದು, ಈ ಕುರಿತು ವಿಡಿಯೋವನ್ನು ಉಪೇಂದ್ರ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

Advertisement

ವಿಡಿಯೋದಲ್ಲಿ ಉಪ್ಪಿ ತಾವು ಮಾಡಿದ ಕೆಲಸದ ಬಗ್ಗೆ ಹೇಳಿದ್ದು, ಎರಡೂವರೆ ತಿಂಗಳ ಹಿಂದೆ ನಾವು ಇಲ್ಲಿ ಸಸಿಗಳನ್ನು ನೆಡುತ್ತಿದ್ದೆವು. ಈಗ ಅದರ ಫಲ ಬಂದಿದೆ. ಚೆಂಡು ಹೂವು, ಸೌತೆಕಾಯಿ, ಎರಡು ಬಗೆಯ ಬದನೆಕಾಯಿ ಎಷ್ಟು ಅದ್ಭುತವಾಗಿವೆ ನೋಡಿ. ನಾವು ಯಾವುದೇ ಕ್ರಿಮಿನಾಶಕ, ರಸಗೊಬ್ಬರವನ್ನು ಬಳಕೆ ಮಾಡಿಲ್ಲ. ಕೇವಲ ದನದ ಗೊಬ್ಬರ, ನೀರು ಬಿಟ್ಟು ಬೆಳೆದಿದ್ದೇವೆ.

ಹುಳ ಬೀಳಲ್ಲ ಅಂತಲ್ಲ ಶೇ.5ರಷ್ಟು ಬೆಳೆಗೆ ಹುಳು ಬೀಳುತ್ತದೆ. ಆದರೆ ನಮ್ಮ ಜೊತೆ ಅವೂ ಬದುಕಬೇಕಲ್ಲವೇ, ನಮ್ಮೊಂದಿಗೆ ಹುಳು ಚಿಟ್ಟೆಗಳು ಸಹ ಇರಬೇಕು. ಕ್ರಿಮಿನಾಶಕ ಹೊಡೆದು ಭೂಮಿ ಹಾಳು ಮಾಡುವುದರ ಜೊತೆಗೆ, ಕೇವಲ ಶೇ.10ರಷ್ಟು ಇಳುವರಿ ಹೆಚ್ಚು ಬರುತ್ತದೆಂದು ತಪ್ಪು ಕೆಲಸ ಮಾಡುತ್ತೇವೆ. ಇದಾವುದನ್ನೂ ಬಳಸದೆ ಬೆಳೆದು ತೋರಿಸಬೇಕೆಂದೇ ಕೃಷಿ ಮಾಡಿದೆ.

 

View this post on Instagram

 

Advertisement

ಅತಿ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ.. This is low cost natural farming…., #natural_farming #upendra #lockdown #farmar #farmer_upendra #upp #prajaakeeya #upp

A post shared by Upendra (@nimmaupendra) on

ಈ ಪದ್ಧತಿಯಿಂದ ಬೆಳೆದ ತರಕಾರಿಗಳು ಆರೋಗ್ಯಕ್ಕೂ ಒಳ್ಳೆಯದು ಎಂದು ತಿಳಿಸಿದ್ದಾರೆ. ಇನ್ನು ಈ ವಿಡಿಯೋ ಪೋಸ್ಟ್‌ನಲ್ಲಿ ಅತೀ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಬಗ್ಗೆ ವಿವರಣೆ ನೀಡಿದ್ದಾರೆ. ಇನ್ನು ಉಪ್ಪಿ ಅವರ ಈ ಪೋಸ್ಟ್‌ಗೆ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದು, ಉಪ್ಪಿ ಹೇಳಿದ್ದನ್ನು ನಿಜವಾಗಿಯೂ ಮಾಡಿ ತೋರಿಸುತ್ತಾರೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next