Advertisement

ಸಂವಿಧಾನದ ಮೌಲ್ಯ ಅರಿತು ನಡೆಯಿರಿ: ಅಂಜಲಿ

12:44 PM Nov 27, 2021 | Team Udayavani |

ಶಹಾಬಾದ: ಸಂವಿಧಾನದ ಆಶೋತ್ತರ, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆಯಬೇಕಿದೆ ಎಂದು ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು. ಶುಕ್ರವಾರ ನಗರಸಭೆಯಿಂದ ಆಯೋಜಿಸಲಾಗಿದ್ದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಡಾ| ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದರು.

Advertisement

ಭಾರತದ ಸಂವಿಧಾನದ ಮೂಲ ತತ್ವ ವಿವಿಧತೆಯಲ್ಲಿ ಏಕತೆಯಾಗಿದೆ. ಸಂವಿಧಾನ ಧರ್ಮಗ್ರಂಥವಿದ್ದಂತೆ. ಸಂವಿಧಾನದ ಆಶಯ ಆಶೋತ್ತರಗಳು ಜಗತ್ತಿನ ಹಲವು ಯಶಸ್ವಿ ಪ್ರಜಾಪ್ರಭುತ್ವ ದೇಶಗಳ ಸಂವಿಧಾನದಲ್ಲೂ ಅಳವಡಿಸಲಾಗಿದೆ. ಡಾ| ಬಿ.ಆರ್‌. ಅಂಬೇಡ್ಕರ್‌ ಕೊಟ್ಟ ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಉತ್ತಮ ಸಂವಿಧಾನ ಎಂದು ಹೇಳಿದರು.

ಮಾಜಿ ನಗರಸಭೆ ಅಧ್ಯಕ್ಷ ಗಿರೀಶ ಕಂಬಾನೂರ ಮಾತನಾಡಿ, ಸಂವಿಧಾನ ರಚನೆ ಹಿಂದೆ ಅನೇಕ ಮಹಾನ್‌ ವ್ಯಕ್ತಿಗಳ ಶ್ರಮವಿದೆ. ಆ ಮಹಾನ್‌ ಪುರುಷರು ಸಂಕಷ್ಟಗಳನ್ನು ಎದುರಿಸಿ ನಮಗೆ ಬದುಕು ಹಕ್ಕನ್ನು ಕಲ್ಪಿಸಿದ್ದಾರೆ. ಅದರಲ್ಲೂ ಡಾ| ಅಂಬೇಡ್ಕರ್‌ ಸಾಕಷ್ಟು ಅಪಮಾನಕ್ಕೆ ಗುರಿಯಾಗಿದ್ದರೂ ದೇಶಕ್ಕೆ ಒಂದು ಉತ್ತಮ ಕೊಡುಗೆ ನೀಡಿದ್ದಾರೆ. ಆ ಸಂವಿಧಾನ ನಮಗೆ ದಾರಿದೀಪವಾಗಿದೆ. ನಾವು ಕೂಡ ಸಂವಿಧಾನದ ಹಾದಿಯಲ್ಲಿ ನಡೆಯಬೇಕಿದೆ ಎಂದು ಹೇಳಿದರು. ನಗರಸಭೆ ಸದಸ್ಯ ನಾಗರಾಜ ಕರಣಿಕ್‌, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ಸಮುದಾಯ ಸಂಘಟಕ ಅಧಿಕಾರಿ ರಘುನಾಥ ನರಸಾಳೆ, ಸಂಜುಕುಮಾರ ಭಾವಿಕಟ್ಟಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next