ಶೃಂಗೇರಿ: ನಾನು ಹೇಳಿದ ದಂಗೆ ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.
ಶನಿವಾರ ಶೃಂಗೇರಿ ಶ್ರೀ ಶಾರದಾಂಬಾ ದೇಗುಲದಲ್ಲಿ ವಿಶೇಷ ಯಾಗ ಮತ್ತು ಪೂಜೆಯಲ್ಲಿ ಪಾಲ್ಗೊಂಡು, ಜಗದ್ಗುರು ಶ್ರೀ ಭಾರತೀ ತೀರ್ಥ ಶ್ರೀಗಳ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.
ನಾನು ದಂಗೆ ಏಳಲು ಹೇಳಿದ ವಿರುದ್ದ ಬಿಜೆಪಿಯವರು ರಾಜ್ಯಪಾಲರಿಗೂ ದೂರು ನೀಡಿದ್ದಾರೆ, ಸಂತೋಷ. ಅದಕ್ಕೆ ನಾನು ಸ್ಪಷ್ಟ ಉತ್ತರ ನೀಡುತ್ತೇನೆ ಎಂದರು.
ಯಡಿಯೂರಪ್ಪನವರು ಬೆಂಕಿ ಹಚ್ಚುವ ಹೇಳಿಕೆ ನೀಡಿದರೆ ಅದು ಪ್ರಜಾಪ್ರಭುತ್ವ.ನಾನು ಹೇಳಿಕೆ ನೀಡಿದರೆ ಪ್ರಜಾಪ್ರಭುತ್ವ ವಿರೋಧಿ ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದರು.
ನಾನು ಸಿಎಂ ಕುರ್ಚಿ ಉಳಿಸಿಕೊಳ್ಳಲು ಯಾಗ ಮಾಡಿಲ್ಲ. ಅಭಿವೃದ್ಧಿಗಾಗಿ ಯಾಗ ಮಾಡಿದ್ದೇನೆ ಎಂದರು. ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ.ಪ್ರಜಾಪ್ರಭುತ್ವದಲ್ಲಿ ಎಷ್ಟೋ ಜನ ಮುಖ್ಯಮಂತ್ರಿಗಳಾಗಿ ಹೋಗಿದ್ದಾರೆ ಎಂದರು.
ಹಲವಾರು ಕಡೆ ಬರಗಾಲ ಇದೆ.ಅಲ್ಲೆಲ್ಲಾ ಅನುಕೂಲ ವಾಗುವಂತಹ ವಾತಾವರಣ ನಿರ್ಮಾಣವಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದರು.