Advertisement

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

05:54 PM Nov 15, 2024 | Team Udayavani |

ದಾವಣಗೆರೆ: ಸಾಮಾಜಿಕ ನ್ಯಾಯದ ಹರಿಕಾರ ಎಂದೇ ಕರೆಯಲ್ಪಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ರೀತಿ ಟೀಕೆ, ಆರೋಪ, ಬೆದರಿಕೆ, ವಿರೋಧ ವ್ಯಕ್ತವಾದರೂ ಜಗ್ಗದೆ ಎಚ್. ಕಾಂತರಾಜ್ ವರದಿ ಸ್ವೀಕರಿಸಿ, ಸಚಿವ ಸಂಪುಟದಲ್ಲಿ ಮಂಡಿಸಿ, ಚರ್ಚಿಸಿ, ಬಹಿರಂಗಪಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಮಾಜಿ ಸಚಿವ ಎಚ್. ಆಂಜನೇಯ ಮನವಿ ಮಾಡಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ ಸಮಾಜ ಕಲ್ಯಾಣ ಇಲಾಖೆ ಸಚಿವನಾಗಿದ್ದಾಗ 2015 ರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ನೇಮಿಸಿದ್ದ ಎಚ್. ಕಾಂತರಾಜ್ ಆಯೋಗದ ವರದಿ ಅತ್ಯಂತ ವೈಜ್ಞಾನಿಕವಾಗಿದೆ. ಸಿದ್ದರಾಮಯ್ಯ ಅವರು ವರದಿ ಸ್ವೀಕರಿಸಿ, ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಕಾಂತರಾಜ್ ಆಯೋಗ ನಡೆಸಿದ ಸಮೀಕ್ಷೆಯಲ್ಲಿ 1.5 ಲಕ್ಷದಷ್ಟು ಶಿಕ್ಷಕರು ಪಾಲ್ಗೊಂಡಿದ್ದರು. ತಹಶೀಲ್ದಾರ್, ಜಿಲ್ಲಾಧಿಕಾರಿಗಳು, ಅನೇಕ ಐಎಎಸ್ ಅಧಿಕಾರಿಗಳು ಸೇರಿದಂತೆ 10 ಸಾವಿರ ಜನರು ಮೇಲುಸ್ತುವಾರಿ ವಹಿಸಿದ್ದರು. 180 ಕೋಟಿ ರೂಪಾಯಿ ವೆಚ್ಚ ಮಾಡಲಾಗಿತ್ತು. ಪ್ರತಿ ಮನೆ ಮನೆಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗಿದೆ. ಹಾದಿಬೀದಿಯಲ್ಲಿ ಹೋಗುವವರಿಗೆ ಗುತ್ತಿಗೆ ನೀಡಿ ವರದಿ ಸಿದ್ಧಪಡಿಸಿಲ್ಲ. ಅತ್ಯಂತ ವೈಜ್ಞಾನಿಕವಾಗಿದೆ. ಕೂಡಲೇ ಸರ್ಕಾರ ಸ್ವೀಕರಿಸಿ, ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ವರದಿ ಬಹಿರಂಗಪಡಿಸಿದ ನಂತರದಲ್ಲಿ ಏನಾದರೂ ಲೋಪದೋಷ, ತಪ್ಪುಗಳು ಇದ್ದಲ್ಲಿ ಸರಿಪಡಿಸಿಕೊಳ್ಳಲು ಎಲ್ಲ ರೀತಿಯ ಮುಕ್ತ ಅವಕಾಶ ಇದೆ. ಆದರೆ, ವರದಿ ಸ್ವೀಕಾರವಾಗುವ ಮುನ್ನವೆ ಸರಿ ಇಲ್ಲ. ವೈಜ್ಞಾನಿಕವಾಗಿ ಇಲ್ಲ. ಮುಟ್ಟ ಬಾರದು ಎನ್ನುವುದು ಸರಿ ಅಲ್ಲ. ಮೊದಲು ಸರ್ಕಾರ ಚರ್ಚಿಸಿ, ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next