Advertisement

ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪುರಸ್ಕೃತರು

08:00 AM Aug 15, 2017 | Team Udayavani |

ಮಂಗಳೂರು ಎಸಿಬಿ ಡಿವೈಎಸ್‌ಪಿ ಸುಧೀರ್‌ ಎಂ. ಹೆಗಡೆ
ಮಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಮಂಗಳೂರು ಠಾಣೆಯ ಡಿವೈಎಸ್‌ಪಿ ಸುಧೀರ್‌ ಎಂ. ಹೆಗಡೆ ಅವರು ಈ ಬಾರಿಯ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸುಧೀರ್‌ ಎಂ. ಹೆಗಡೆ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆ ಶಿರಸಿಯವರಾಗಿದ್ದು, 1996ರ ಪಿಎಸ್‌ಐ  ಬ್ಯಾಚ್‌ನವರು. ಪೊಲೀಸ್‌ ಸೇವೆಗೆ ಸೇರ್ಪಡೆಗೊಂಡ ಬಳಿಕ ಪ್ರಥಮವಾಗಿ ಕಲಬುರಗಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಆಗಿದ್ದು, ಬಳಿಕ ದಾವಣಗೆರೆ, ಯಾದಗಿರಿ, ಕಾರವಾರ, ಶೃಂಗೇರಿ ಠಾಣೆಗಳಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಸೇವೆ ಸಲ್ಲಿಸಿದ್ದರು. 2016ರಲ್ಲಿ ಡಿವೈಎಸ್‌ಪಿ ಹುದ್ದೆಗೆ ಭಡ್ತಿ ಹೊಂದಿದ್ದರು. 2016ರ ಎ. 14ರಿಂದ ಮಂಗಳೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Advertisement

ಕೊಡಗು ಎಸ್‌ಪಿ ರಾಜೇಂದ್ರ ಪ್ರಸಾದ್‌
ಮಡಿಕೇರಿ
: ಅತ್ಯುತ್ತಮ ಸೇವೆಗಾಗಿ ಸ್ವಾತಂತ್ರೊÂàತ್ಸವ ಸಂದರ್ಭ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ಕೊಡಗು ಎಸ್‌ಪಿ ಪಿ. ರಾಜೇಂದ್ರ ಪ್ರಸಾದ್‌ ಆಯ್ಕೆಯಾಗಿದ್ದಾರೆ.

2016ರ ಜೂನ್‌ ತಿಂಗಳಿನಲ್ಲಿ ಕೊಡಗು ಜಿಲ್ಲಾ ಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡ ಅವರು ಒಂದು ವರ್ಷದಲ್ಲಿ ಹಲವು ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಮತ್ತು ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೋಮು ಸಂಘರ್ಷಗಳು ಮರುಕಳಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಮಾಜದಲ್ಲಿ ಸಾಮರಸ್ಯ ಮೂಡುವಂತೆ ಮಾಡಿದ್ದಾರೆ. ಅಪರಾಧ ಪ್ರಕರಣಗಳ ಬಗ್ಗೆ ಜನರು ಹಾಗೂ ವಿದ್ಯಾರ್ಥಿಗಳು ಜಾಗೃತರಾಗುವಂತೆ ನೋಡಿಕೊಂಡಿದ್ದಾರೆ.

ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್‌ ರಮೇಶ್‌
ಮಂಗಳೂರು
: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್‌ ರಮೇಶ್‌ ಅವರಿಗೆ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಇಲಾಖೆಯಲ್ಲಿ ವಿಶಿಷ್ಟ ಸೇವೆಯನ್ನು ಗುರುತಿಸಿ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕವನ್ನು ಘೋಷಿಸಲಾಗಿದೆ.

1989ರಲ್ಲಿ ಇಲಾಖೆಗೆ ಸೇರಿರುವ ರಮೇಶ್‌ ಅವರು  28 ವರ್ಷಗಳ ಸೇವಾ ಅವಧಿಯಲ್ಲಿ ಮಂಗಳೂರು, ಉಡುಪಿ, ಮಡಿಕೇರಿ, ಚಿಕ್ಕಮಗಳೂರು, ಬೆಂಗಳೂರು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಪ್ಯುಟಿ ಕಮಾಂಡೆಂಟ್‌ ಆಗಿರುವ ಅವರು ಹೆಚ್ಚುವರಿಯಾಗಿ ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
2008ರಲ್ಲಿ ರಾಷ್ಟ್ರಪತಿಗಳ ಶ್ಲಾಘನೀಯ ಪದಕ, 2008ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರ ಸೇವೆಯನ್ನು ಗುರುತಿಸಿ ಯುವ ವಾಹಿನಿ ಮಂಗಳೂರು 2014ರಲ್ಲಿ ಯುವ ವಾಹಿನಿ ಸಾಧನ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next