ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಿಂದ ಮೂಳೂರುವರೆಗಿನ ರಸ್ತೆಯಲ್ಲಿ ಅತೀ ವೇಗ ಮತ್ತು ತೀವ್ರ ಅಜಾಗರೂಕತೆಯಿಂದ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ನಾಲ್ಕು ವಾಹನಗಳು ಮತ್ತು ಚಾಲಕರ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆದ್ದಾರಿಯಲ್ಲಿ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ವಾಹನಗಳನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಚಾಲಕರಾದ ಉದ್ಯಾವರ ಗುಡ್ಡೆಯಂಗಡಿ ನಿವಾಸಿ ಅಯಾನ್ (24) ಕುಂಜಿಬೆಟ್ಟು ನಿವಾಸಿ ಮಿಶಾಲುದೀªನ್ (23), ಉಡುಪಿ ಹೈಕಾ ಬಿಲ್ಡಿಂಗ್ ನಿವಾಸಿ ಶಾನೂನ್ ಡಿ. ಸೋಜ (25), ಕೋಡಂಕೂರು ವಿವೇಕ್ (23) ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಹೀಂದ್ರಾ ಜೀಪು, ಕಪ್ಪು ಬಣ್ಣದ ಕ್ರೇಟಾ ಕಾರು, ಬಿಳಿ ಬಣ್ಣದ ಫಾರ್ಚುನರ್ ಕಾರು, ಬಿಳಿ ಬಣ್ಣದ ಸ್ವಿಫ್ಟ್ ಕಾರುಗಳನ್ನು ಚಾಲಕರು ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದಿದ್ದು ಬಳಿಕ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಬಗ್ಗೆ ಸಾರ್ವಜನಿಕರು ಕಾಪು ಎಸ್ಸೆ$ç ಸುಮಾ ಬಿ. ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ ಮತ್ತು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಉಡುಪಿ ಎಸ್ಪಿ ಹಾಕೈ ಅಕ್ಷಯ್ ಮಚೀcಂದ್ರ ಅವರ ಮಾರ್ಗದರ್ಶನದಲ್ಲಿ ಕಾಯಾಚರಣೆಗಿಳಿದ ಕಾಪು ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪರಿಶೀಲಿಸಿದ್ದು ವಿಡಿಯೋದಲ್ಲಿನ ಸ್ಥಳವು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಮೂಡಬೆಟ್ಟು ಗ್ರಾಮದಿಂದ ಮೂಳೂರು ಗ್ರಾಮದವರೆಗಿನ ಉಡುಪಿ – ಮಂಗಳೂರು ರಸ್ತೆ ಎಂದು ಗುರುತಿಸಿದ್ದಾರೆ. ಅಪಾಯಕಾರಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ವಾಹನಗಳನ್ನು ವಶಕ್ಕೆ ತೆಗೆದುಕೊಂಡು, ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.