Advertisement

ಮಕ್ಕಳ ಪ್ರತಿಭೆೆ ಗುರುತಿಸಿ ಪ್ರೋತ್ಸಾಹಿಸಿ: ಲೋಕೇಶ್ವರಿ ಗೋಪಾಲ್‌ 

02:35 AM Nov 19, 2018 | Karthik A |

ಮಡಿಕೇರಿ: ಪ್ರತಿಯೊಬ್ಬ ಮಕ್ಕಳಲ್ಲಿಯೂ ಒಂದೊಂದು ರೀತಿಯ ಪ್ರತಿಭೆ ಇದ್ದು, ಪ್ರತಿಭೆಯನ್ನು ಪೋತ್ಸಾಹಿಸುವ ನಿಟ್ಟಿನಲ್ಲಿ ಪೋಷಕರು ಉತ್ತೇಜನ ನೀಡುವಂತಾಗಬೇಕು ಎಂದು ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್‌ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳ ಬೆಳವಣಿಗೆಗೆ ಪೋಷಕರು ಹೆಚ್ಚಿನ ನಿಗಾ ವಹಿಸಬೇಕು. ಆ ದಿಸೆಯಲ್ಲಿ ಪ್ರತಿಭೆಯನ್ನು ಪೋ›ತ್ಸಾಹಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ನಗರಸಭೆ ಅಧ್ಯಕ್ಷ  ಕಾವೇರಮ್ಮ ಸೋಮಣ್ಣ ಅವರು ಮಾತನಾಡಿ ವಿದ್ಯಾರ್ಥಿಗಳು ಪಾಠ ಪ್ರವಚನ ಜೊತೆಗೆ ಕಲೆ, ಹಾಡುಗಾರಿಕೆ, ಸಂಗೀತ, ಸಾಹಿತ್ಯ ಮತ್ತಿತರ ಪ್ರತಿಭೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 

Advertisement

ಸಂತ ಮೈಕಲರ ಶಾಲೆಯ ಫಾದರ್‌ ನವೀನ್‌ ಕುಮಾರ್‌ ಅವರು ಮಾತನಾಡಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗಮನಿಸಲಾಗುತ್ತದೆ. ಆದ್ದರಿಂದ ಶಿಕ್ಷಣದ ಜೊತೆಗೆ ಕ್ರೀಡೆ, ಸಾಹಿತ್ಯ, ಸಂಗೀತ, ಭಾಷಣ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಭೆಯಲ್ಲಿ ತೊಡಗಿಸಿ ಕೊಳ್ಳುವಂತಾಗಬೇಕು,. ಇದರಿಂದ ಹೆಚ್ಚಿನ ಜ್ಞಾನ ವಿಕಸನಕ್ಕೆ ಅನುಕೂಲವಾಗಲಿದೆ ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆಂಚಪ್ಪ ಅವರು ಮಾತನಾಡಿ ಸ್ಪರ್ಧೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಇದರಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಚ್ಚಾಡೋ ಅವರು ಮಾತನಾಡಿ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವಂತಾಗಬೇಕು ಎಂದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೋಮಶೇಖರ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚೇತನ್‌ ಅವರು ಮಾತನಾಡಿದರು.

ಜಿ.ಪಂ.ಸಿಇಓ ಲಕ್ಷ್ಮೀಪ್ರಿಯ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಫಿಲೀಪ್‌ ವಾಸು, ಸರ್ವ ಶಿಕ್ಷಣ ಅಭಿಯಾನದ ಅಧಿಕಾರಿ ಪಾಂಡು ಮತ್ತಿರರು ಉಪಸ್ಥಿತರಿದರು. ಭಾಷಣ ಸ್ಪರ್ಧೆ, ಜಾನಪದ ಗೀತೆ, ಭಾವಗೀತೆ, ಭರತನಾಟ್ಯ, ಛದ್ಮವೇಷ, ಆಶುಭಾಷಣ ಸ್ಪರ್ಧೆ, ಮಿಮಿಕ್ರಿ, ರಂಗವಲ್ಲಿ ಸೇರಿದಂತೆ ವೈವಿಧ್ಯಮಯ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಮಿಂಚಿದರು.

Advertisement

Udayavani is now on Telegram. Click here to join our channel and stay updated with the latest news.

Next