Advertisement

“ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ರಚನೆ; ಆಡಳಿತ ಸುಧಾರಣ ಆಯೋಗ ಶಿಫಾರಸು

11:48 PM Feb 18, 2022 | Team Udayavani |

ಬೆಂಗಳೂರು: ಸರಕಾರದ ವಿವಿಧ ಇಲಾಖೆಗಳಲ್ಲಿ, ನಿಗಮ ಮಂಡಳಿಗಳಲ್ಲಿನ ಅನುಪಯುಕ್ತ ವೆಚ್ಚ ತಡೆಯಲು ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ ರಚಿಸಬಹುದು ಎಂದು ಕರ್ನಾಟಕ ಆಡಳಿತ ಸುಧಾರಣ ಆಯೋಗ-2 ಸರಕಾರಕ್ಕೆ ಶಿಫಾರಸು ಮಾಡಿದೆ. ಆಯೋಗದ 2ನೆಯ ಹಾಗೂ 3ನೆಯ ವರದಿಯನ್ನು ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್‌ ಶುಕ್ರವಾರ ಮುಖ್ಯಮಂತ್ರಿಗೆ ಸಲ್ಲಿಸಿದರು.

Advertisement

ಈ ಎರಡೂ ವರದಿಗಳಲ್ಲಿ ಸಮಾಜ ಕಲ್ಯಾಣ, ಅಲ್ಪಸಂಖ್ಯಾಕರ ಕಲ್ಯಾಣ, ಒಳಾಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ನಗರಾ ಭಿವೃದ್ಧಿ, ಇಂಧನ ಸಹಿತ ಎಂಟು ಇಲಾಖೆಗಳಿಗೆ ಸಂಬಂಧಿಸಿ 588 ಸಾಮಾನ್ಯ, 508 ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಒಟ್ಟು 1,165 ಶಿಫಾರಸುಗಳಿವೆೆ.

ಪ್ರಮುಖ ಶಿಫಾರಸುಗಳು
– ಸರಕಾರದ ವಿವಿಧ ಇಲಾಖೆ ಗಳಲ್ಲಿ, ನಿಗಮ ಮಂಡಳಿಗಳಲ್ಲಿನ ಅನುಪಯುಕ್ತ ವೆಚ್ಚ ತಡೆಯಲು ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ ರಚಿಸಬಹುದು.
– ಎಲ್ಲ ಇಲಾಖೆಗಳ ಗ್ರೂಪ್‌ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ಮಾಡಲು ಕಾಯ್ದೆ ಜಾರಿ.
– ಎಲ್ಲ ಅಂಚೆ ಕಚೇರಿಗಳನ್ನು ರಾಜ್ಯ ಸರಕಾರದ ಸೇವೆಗಳನ್ನು ಒದಗಿಸಲು ಬಳಸಿಕೊಳ್ಳಬಹುದು.
– ಸಾರ್ವಜನಿಕ ಉದ್ಯಮ ಗಳ ಇಲಾಖೆಯನ್ನು ಆರ್ಥಿಕ ಇಲಾಖೆಯಲ್ಲಿ ವಿಲೀನ.
– ಹೊರಗುತ್ತಿಗೆ ಸಿಬಂದಿ ನೇಮಕ ಸಂದರ್ಭ ಎಸ್ಸಿ, ಎಸ್ಟಿ ವರ್ಗಗಳಿಗೆ ಅಗತ್ಯ ಪ್ರಾತಿನಿಧ್ಯ ನೀಡಬೇಕು.
– ಪ್ರತಿಯೊಂದು ಪೊಲೀಸ್‌ ಠಾಣೆಯಲ್ಲಿ ನಾಗರಿಕ ಸೇವೆಗಳ ಸಹಾಯ ಕೇಂದ್ರ ಸ್ಥಾಪಿಸಬೇಕು.
– ಪೊಲೀಸ್‌ ಇಲಾಖೆಯ ಕಾನ್‌ಸ್ಟೆಬಲ್‌, ಸಬ್‌ ಇನ್‌ಸ್ಪೆಕ್ಟರ್‌ವರೆಗಿನ ಗೆಜೆಟೆಡ್‌ ಅಲ್ಲದ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ.
– ಗ್ರಾ. ಪಂ. ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿಗಳ ಅರ್ಜಿ ಪಡೆದು ಶಿಫಾರಸು ಮಾಡುವ ಅಧಿಕಾರ ನೀಡಬಹುದು.

Advertisement

Udayavani is now on Telegram. Click here to join our channel and stay updated with the latest news.

Next