Advertisement
ಸಮಿತಿಯ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಮಂಗಳವಾರ ಸದನದಲ್ಲಿ ವರದಿ ಮಂಡಿಸಿದ್ದು, ಪ್ರಸ್ತುತ ಸಹಕಾರ ಸಂಘಗಳು ಮತ್ತು ಬ್ಯಾಂಕುಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ಇರುವುದಿಲ್ಲ. ಹೀಗಾಗಿ, ಸಹಕಾರ ಕಾನೂನಿಗೆ ತಿದ್ದುಪಡಿ ತಂದು ಮೀಸಲಾತಿ ಕಲ್ಪಿಸಬೇಕೆಂದು ಶಿಫಾರಸು ಮಾಡಿದೆ. ಕೃಷಿ ಮಾರುಕಟ್ಟೆ ಸಮಿತಿಯು ಮಳಿಗೆಗಳನ್ನು ಹಂಚು ವಾಗ ಪರಿಶಿಷ್ಟ ಜಾತಿ ಹಾಗೂ ಪಂಗಡದ ನಿರುದ್ಯೋಗಿ ಯುವಕರಿಗೆ ಮೀಸಲಾತಿ ಕಲ್ಪಿಸಬೇಕೆಂದು ಸಮಿತಿ ಶಿಫಾರಸು ಮಾಡಿದೆ. ವಿದ್ಯಾರ್ಥಿ ವೇತನ ಪಡೆಯಲು ಸರ್ಕಾರಿ ಡಿ ಮತ್ತು ಸಿ ವೃಂದದ ನೌಕರರ ಮಕ್ಕಳಿಗೂ ಆನುಕೂಲವಾಗುವಂತೆವಾರ್ಷಿಕ ಆದಾಯ ಮಿತಿ ಹೆಚ್ಚಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.
ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಸೌಲಭ್ಯ ವಂಚಿತರನ್ನಾಗಿ ಮಾಡುತ್ತಿದ್ದು, ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಶಿಕ್ಷೆಯ ಪ್ರಮಾಣ ಹೆಚ್ಚಿಸಬೇಕು. ಇಂತಹ ಪ್ರಕರಣಗಳಲ್ಲಿ ನಿರ್ಲಕ್ಷ ತೋರುವ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಶೀಘ್ರ ತನಿಖೆ ನಡೆಸಿ ಶಿಕ್ಷೆ ಪ್ರಕಟಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.