Advertisement
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡೆಂಘೀ ಕುರಿತ ಜಿಲ್ಲಾಮಟ್ಟದ ಅಧಿಕಾರಿಗಳ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಸರಕಾರ ನೂರಾರು ಕೋಟಿ ರೂ. ಖರ್ಚು ಮಾಡಿ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ವ್ಯವಸ್ಥೆ ಮಾಡಿದ್ದರೂ, ಅಧಿಕಾರಿಗಳು ಸರಕಾರಿ ಆಸ್ಪತ್ರೆಗೆ ಬರುವ ಬರುವ ಡೆಂಘೀ ಪೀಡಿತ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಎಂದು ಅಧಿಕಾರಿಗಳು ಹೇಳಿದ ಕುರಿತು ನನಗೆ ದೂರು ಬಂದಿವೆ. ಈ ಕುರಿತು ವಾರದಲ್ಲಿ ಸಮಗ್ರ ತನಿಖೆ ನಡೆಸಿ ವರದಿ ನೀಡಿ ಎಂದು ಸೂಚಿಸಿದರಲ್ಲದೇ, ವರದಿಯಲ್ಲಿ ತಪ್ಪಿತಸ್ಥರು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
Related Articles
Advertisement
ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಸೇಡಂ ಸಹಾಯಕ ಆಯುಕ್ತೆ ಬಿ. ಸುಶೀಲಾ, ಕಲಬುರಗಿ ಸಹಾಯಕ ಆಯುಕ್ತ ರಾಚಪ್ಪ, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎ.ಎಸ್.ರುದ್ರವಾಡಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು. ನಂತರ ಸಚಿವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಘೀ, ಮಕ್ಕಳ ವಾರ್ಡ್ ಹಾಗೂ ರಕ್ತನಿಧಿ ಪರಿಶೀಲಿಸಿದರು.
ಫಾಗಿಂಗ್‌ಗೆ ಆದ್ಯತೆ ನೀಡಲು ಸೂಚನೆ ಹೆಚ್ಚು ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಫಾಗಿಂಗ್ ಯಂತ್ರಗಳನ್ನು ಕಲಬುರಗಿ ನಗರದಲ್ಲಿ ಫಾಗಿಂಗ್ ಮಾಡಲು ಬಳಕೆ ಮಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡಿ ಎಂದು ಸಚಿವ ಡಾ| ಶರಣಪ್ರಕಾಶ ಪಾಟೀಲ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಅವಧಿ ಮುಗಿಯಲಿರುವ ಆರೋಗ್ಯ ಕಾರ್ಯಕರ್ತರನ್ನು ಮುಂದುವರಿಸುವಂತೆ, ವಾರ್ಡ್ ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಿಸಿ, ಸೊಳ್ಳೆಯ ನಿರ್ಮೂಲನೆ ಮಾಡಬೇಕು.
ಅಲ್ಲದೆ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಡೆಂಘೀ ಪ್ರಕರಣಗಳನ್ನು ಕಡಿಮೆ ಮಾಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಮೂರುಗಾಲಿ ಗಾಡಿ ಇರುವ ಹಾಗೂ ಎಂಟು ಕೈ ಚಾಲಿತ ಫಾಗಿಂಗ್ ಯಂತ್ರಗಳಿವೆ. ಅದರೊಂದಿಗೆ ಜಿಲ್ಲೆಯಇತೆರೆಡೆಗಳಲ್ಲಿರುವ 38 ಯಂತ್ರಗಳು ಎರಡು ದಿನಗಳಲ್ಲಿ ಮಹಾನಗರ ಪಾಲಿಕೆ ಸುಪರ್ದಿಗೆ ನೀಡಿ ನಗರದಲ್ಲಿನ ಸೊಳ್ಳೆಗಳ ನಿರ್ಮೂಲನೆ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.