Advertisement

Sandalwood: ಮಾ.8ಕ್ಕೆ ‘ರೆಕಾರ್ಡ್‌ ಬ್ರೇಕ್‌’

10:42 AM Feb 28, 2024 | Team Udayavani |

“ರೆಕಾರ್ಡ್‌ ಬ್ರೇಕ್‌’ ಎಂಬ ಸಿನಿಮಾವೊಂದು ಸದ್ದಿಲ್ಲದೇ ತಯಾರಾಗಿದ್ದು, ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಚಿತ್ರ ಮಾರ್ಚ್‌ 8ರಂದು ಬಿಡುಗಡೆಯಾಗುತ್ತಿದೆ. ಭಾರತದಾದ್ಯಂತ ಸುಮಾರು ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಲಿದೆ.

Advertisement

“ನಮ್ಮ ಸಂಸ್ಥೆಯಿಂದ ಈವರೆಗೂ ನೂರಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ. ಸಾವಿರ ಸಾವಿರ ಸಂಖ್ಯೆಗಳಲ್ಲಿ ಅನೇಕ ಭಾಷೆಗಳ ಚಿತ್ರಗಳನ್ನು ವಿತರಣೆ ಕೂಡಾ ಮಾಡಿದ್ದೇವೆ. ದುಡ್ಡು ಮಾಡುವುದಕ್ಕಿಂತ ನೋಡುಗರಿಗೆ ಒಳ್ಳೆಯ ಚಿತ್ರ ಕೊಡುವ ಆಸೆ ನನ್ನದು. ಇನ್ನು ಈ ಚಿತ್ರದ ಬಗ್ಗೆ ಹೇಳಬೇಕೆಂದರೆ ಚಂಟಿ ಹಾಗೂ ಬಂಟಿ ಎಂಬ ಅನಾಥ ಹುಡುಗರಿಬ್ಬರು ತಾವು ಅಂದುಕೊಂಡದ್ದನ್ನು ಹಾಗೂ ಯಾರು ನಿರೀಕ್ಷಿಸದ್ದನ್ನು ಸಾಧಿಸುವ ಕಥೆಯಿದು. ನಟಿ ಜಯಸುಧಾ ಅವರ ಪುತ್ರ ನಿಹಾರ್‌ ಹಾಗೂ ಹೊಸ ಪ್ರತಿಭೆ ನಾಗಾರ್ಜುನ ಚಂಟಿ ಹಾಗೂ ಬಂಟಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಗ್ಧಾ ಇಫ್ತೇಕರ್‌ ಈ ಚಿತ್ರದ ನಾಯಕಿ.  ಸತ್ಯಕೃಷ್ಣ, ಸಂಜನಾ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.  ಚಿತ್ರ ಮಾರ್ಚ್‌ 8ರಂದು ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಭೋಜಪುರಿ, ಬೆಂಗಾಲಿ, ಒಡಿಯಾ ಭಾಷೆಗಳಲ್ಲಿ ಏಕಕಾಲಕ್ಕೆ ಭಾರತದಾದ್ಯಂತ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ’ ಎಂದು ವಿವರ ನೀಡಿದರು.

ನಿರ್ಮಾಪಕ ಕಂ ನಿರ್ದೇಶಕ ಚಲದವಾಡ ಶ್ರೀನಿವಾಸರಾವ್‌. ನಾಯಕರಾದ ನಿಹಾರ್‌, ನಾಗಾರ್ಜುನ, ನಾಯಕಿ ರಗ್ಧಾ ಇಫ್ತೇಕರ್‌, ನಟಿ ಸತ್ಯಕೃಷ್ಣ ಹಾಗೂ ನಟ ಪ್ರಸನ್ನ ಕುಮಾರ್‌ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next