ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣ ಯೋಜನೆ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಸುಸಜ್ಜಿತ ಶಾಲೆಗಳ ಕಟ್ಟಡ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ಮೇರೆಗೆ ಕಾಮಗಾರಿ ನಡೆಯುತ್ತಿದ್ದು, ಯೋಜನೆಗಳು ಪೂರ್ಣಗೊಳ್ಳುವ ಹಂತದಲ್ಲಿವೆ ಎಂದು ಹೇಳಿದ್ದಾರೆ.
ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 756 ಕೋ. ರೂ. ವೆಚ್ಚದಲ್ಲಿ ರಾಜ್ಯಾದ್ಯಂತ 3,423 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಈ ಪೈಕಿ ಈಗಾಗಲೇ 2,684 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ.
ಇದನ್ನೂ ಓದಿ:ಕುಷ್ಟಗಿ: ಎರಡನೇ ಡೋಸ್ ಆಗದಿದ್ದರೂ ಪ್ರಮಾಣ ಪತ್ರ: ಬೆಚ್ಚಿ ಬಿದ್ದ ಕುಟುಂಬ ವರ್ಗ.!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 137 ಕೋ. ರೂ. ವೆಚ್ಚದಲ್ಲಿ ಒಟ್ಟು 842 ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಪೈಕಿ 525 ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಉಳಿದವುಗಳನ್ನು ಮುಂದಿನ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.