Advertisement
ಕಳೆದ ಮಾ.22 ರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ಸೋಂಕು ತಡೆಯುವ ಉದ್ದೇಶದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುನ್ನೆಚ್ಚರಿಕೆ ಕ್ರಮ ವಾಗಿ ಲಾಕ್‌ಡೌನ್ ಘೋಷಿಸಿದ್ದರಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿತ್ತು. ಆದರೆ ಕಳೆದ ಮೇ.4 ರಿಂದ ರಾಜ್ಯಾದ್ಯಂತ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದು, ಮದ್ಯ ಮಾರಾಟ ಜೋರಾಗಿಯೇ ನಡೆಯುತ್ತಿದೆ. ಜಿಲ್ಲೆಯಲ್ಲಿ ಸದ್ಯ ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡದೆ ಕೇವಲ ಎಂಎಸ್ ಐಎಲ್ ಹಾಗೂ ವೈನ್‌ಶಾಪ್‌ಗ್ಳಿಗೆ ಮಾತ್ರ ಅವಕಾಶ ನೀಡಿದ್ದು, ಜಿಲ್ಲಾದ್ಯಂತ ಒಟ್ಟು 89 ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಜಿಲ್ಲೆಯಲ್ಲಿ ಒಟ್ಟು 1.55.220 ಲೀ. ಭಾರತೀಯ ಮದ್ಯ ಮಾರಾಟವಾಗಿದ್ದುಆ ಪೈಕಿ 42,538 ಲೀ. ಬಿಯರ್ ಮಾರಾಟವಾಗಿದೆ ಎಂದು ಜಿಲ್ಲಾ ಅಬಕಾರಿ ಆಯುಕ್ತ ನರೇಂದ್ರ ಕುಮಾರ್ ಶುಕ್ರವಾರ ಉದಯವಾಣಿಗೆ ಮಾಹಿತಿ ನೀಡಿದರು.