Advertisement

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

10:16 AM Oct 22, 2021 | Team Udayavani |

ನವದೆಹಲಿ:ನಮ್ಮ ದೇಶ ಕರ್ತವ್ಯ ಪಾಲಿಸಿದೆ. ದೇಶಾದ್ಯಂತ ನೂರು ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಯಶಸ್ಸು. ಇದರ ಪರಿಣಾಮ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಯಶಸ್ಸು ಪಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಹೇಳಿದರು.

Advertisement

ಶುಕ್ರವಾರ(ಅಕ್ಟೋಬರ್ 22) ದೇಶವನ್ನುದ್ದೇಶಿಸಿ ಮಾತನಾಡಿದ ಅವರು. ದೇಶದಲ್ಲಿ ನೂರು ಕೋಟಿ ಲಸಿಕೆ ನೀಡುವ ಗುರಿ ತಲುಪಿದ್ದೇವೆ. 100 ಕೋಟಿ ಡೋಸ್ ಲಸಿಕೆ ಎಲ್ಲದಕ್ಕೂ ಉತ್ತರ ನೀಡಿದೆ ಎಂದು ತಿಳಿಸಿದರು.

ಈ ಹಿಂದೆ ಭಾರತ ಲಸಿಕೆಗಳಿಗಾಗಿ ಬೇರೆ ದೇಶಗಳನ್ನು ಅವಲಂಬಿಸಬೇಕಿತ್ತು. ಆದರೆ ಕೋವಿಡ್ 19 ಸೋಂಕು ಸಂದರ್ಭದಲ್ಲಿ ಭಾರತವೇ ಕೋವಿಡ್ ಲಸಿಕೆ ಕಂಡು ಹಿಡಿದು ಇತರ ದೇಶಗಳಿಗೆ ರಫ್ತು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next