Advertisement
ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಮತ್ತು ಹಾಸನದಲ್ಲಿ 4 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ದಾಖಲಾಗಿದೆ. 1996ರ ಮಾರ್ಚ್ 29 ಹಾಗೂ 30ರಂದು ಬೆಂಗಳೂರಿನಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಹಾಗೂ ಹಾಸನದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇತ್ತು. ಇದು ಮಾರ್ಚ್ ತಿಂಗಳ ಸಾರ್ವಕಾಲಿಕ ದಾಖಲೆಯಾಗಿದೆ. ತಿಂಗಳಾಂತ್ಯಕ್ಕೆ ಇನ್ನೂ ಐದು ದಿನಗಳು ಬಾಕಿ ಇದ್ದು, ಬಿಸಿಲು ಕೂಡ ಏರುಗತಿಯಲ್ಲಿ ಸಾಗಿದ್ದರಿಂದ ಈ ದಾಖಲೆ ಸರಿಗಟ್ಟುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಸಮುದ್ರದ ಕಡೆಯಿಂದ ಗಾಳಿ ಬೀಸಬೇಕಿತ್ತು. ಆದರೆ, ಗಾಳಿ ಬರುತ್ತಿಲ್ಲ. ಬಂದರೂ ನಗರದ ಒಳಗೆ ಬರಲು ಕಟ್ಟಡಗಳು, ಹೊಗೆ ಅಡ್ಡವಿದೆ. ಜತೆಗೆ ಇದು ಹೇಳಿ ಕೇಳಿ ಬೇಸಿಗೆ. ಹೀಗಾಗಿ ಬಿಸಿಲಿನ ಧಗೆ ಹೆಚ್ಚುತ್ತಿದೆ. ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಹೆಚ್ಚು-ಕಡಿಮೆ ಇದ್ದರೆ ಅಷ್ಟೇನೂ ಸಮಸ್ಯೆ ಇಲ್ಲ. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಉಷ್ಣಾಂಶ ವಿಪರೀತಕ್ಕೆ ಹೋಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಎಸ್.ಎಂ.ಮೆಟ್ರಿ ಹೇಳುತ್ತಾರೆ.
Related Articles
Advertisement