Advertisement

Kannada ಶಿಕ್ಷಕರನ್ನೇ ನೇಮಿಸಿ; ಮಹಾರಾಷ್ಟ್ರ ಸರಕಾರವನ್ನು ಆಗ್ರಹಿಸಿ ಸಚಿವ ತಂಗಡಗಿ ಪತ್ರ

12:33 AM Jun 22, 2024 | Team Udayavani |

ಬೆಂಗಳೂರು: ಮಹಾರಾಷ್ಟ್ರದ ಜತ್‌ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಕನ್ನಡ ಸಂಘಟನೆಗಳ ಪ್ರತಿಭಟನೆ, ಆಗ್ರಹಗಳ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ, ಮಹಾರಾಷ್ಟ್ರ ಸರಕಾರಕ್ಕೆ ಈಗಾಗಲೇ ಪತ್ರ ಬರೆದು ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಲಾಗಿದೆ ಎಂದು ಹೇಳಿದ್ದಾರೆ.

Advertisement

ಮಹಾರಾಷ್ಟ್ರದ ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ. ಅಲ್ಲಿನ ಜಿಲ್ಲಾಧಿಕಾರಿಯೊಂದಿಗೂ ಚರ್ಚೆ ಮಾಡುತ್ತೇನೆ. ನಮ್ಮ ಮುಖ್ಯಮಂತ್ರಿಯೊಂದಿಗೂ ಚರ್ಚೆ ನಡೆಸಿದ್ದೇನೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಗಡಿ ಪ್ರಾಧಿಕಾರದ ಅಧ್ಯಕ್ಷರು ಕೂಡ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಆದಷ್ಟು ಬೇಗ ಸಮಸ್ಯೆ ಇತ್ಯರ್ಥಪಡಿಸಲಾಗುವುದು. ಯಾವುದೇ ರೀತಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನವೆಂಬರ್‌ ಒಳಗೆ
ಸಾಹಿತ್ಯ ಸಮ್ಮೇಳನ?
ಮುಂಬರುವ ನವೆಂಬರ್‌ ಒಳಗೆ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಯೋಚನೆ ಇದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಶಿವರಾಜ್‌ ತಂಗಡಗಿ ತಿಳಿಸಿದರು.

ಈ ಬಾರಿ ಸಮ್ಮೇಳನವನ್ನು ಸಕ್ಕರೆ ನಾಡು ಮಂಡ್ಯ ದಲ್ಲಿ ಆಯೋಜಿಸಲಾಗುತ್ತಿದೆ. ಅಲ್ಲಿನ ಉಸ್ತುವಾರಿ ಸಚಿವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಯೊಂದಿಗೆ ಚರ್ಚಿಸಿ ದಿನಾಂಕ ಪ್ರಕಟಿಸಲಾಗು ವುದು. ಅದೇ ರೀತಿ ವಿಶ್ವ ಕನ್ನಡ ಸಮ್ಮೇಳನ ವನ್ನೂ ನಡೆಸಬೇಕು ಎನ್ನುವುದು ನನ್ನ ಆಸೆ. ಈ ಸಂಬಂಧ ಮುಖ್ಯಮಂತ್ರಿ ಗಮನಕ್ಕೆ ತಂದು

Advertisement

ಈ ಹಿಂದೆ ಕೇರಳ ಸರಕಾರ ಇದೇ ರೀತಿ ಕಾಸರ ಗೋಡಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಿ ಶಿಕ್ಷಕರನ್ನು ನೇಮಿಸಿತ್ತು. ನಾನು ಮಧ್ಯಪ್ರವೇಶಿಸಿದ ಬಳಿಕ ಕೇರಳ ಸರಕಾರ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಈಗ ಮಹಾರಾಷ್ಟ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ.
-ಶಿವರಾಜ್‌ ತಂಗಡಗಿ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next