Advertisement

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

09:33 PM May 24, 2024 | Team Udayavani |

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಹುದ್ದೆ ಸಹಿತ ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ಸಂಭಾವ್ಯ ದಿನಾಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ಪ್ರಕಟಿಸಿದೆ.

Advertisement

ಪೊಲೀಸ್‌ ಇಲಾಖೆಯ 402 ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಳಿದಂತೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕ.ರಾ.ಸಾ.ಪೇದೆ, ಕುಶಲಕರ್ಮಿ, ತಾಂತ್ರಿಕ ಸಹಾಯಕ) 36 ಹುದ್ದೆಗಳಿಗೆ ಜುಲೈ 12ರಿಂದ 14ರ ವರೆಗೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಸಹಾಯಕ ಎಂಜಿನಿಯರ್‌-ಸಿವಿಲ್, ಪ್ರಥಮ ದರ್ಜೆ ಲೆಕ್ಕ ಸಹಾಯಕರು-ಗ್ರೂಪ್‌ ಸಿ) 64 ಹುದ್ದೆಗಳಿಗೆ ಆಗಸ್ಟ್‌ 11ರಂದು ಪರೀಕ್ಷೆ ನಡೆಯಲಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ನಿರ್ವಾಹಕ- ದರ್ಜೆ-3 ಮೇಲ್ವಿಚಾರಕೇತರ) 2,500 ಹುದ್ದೆಗಳಿಗೆ ಸೆ.1ರಂದು ಪರೀಕ್ಷಾ ವೇಳಾಪಟ್ಟಿ ನಿಗದಿಯಾಗಿದೆ. ಕಂದಾಯ ಇಲಾಖೆಯ (ಗ್ರಾಮ ಆಡಳಿತ ಅಧಿಕಾರಿ) 1,000 ಹುದ್ದೆಗಳಿಗೆ ಅ.27ರಂದು ಪರೀಕ್ಷೆ ನಡೆಯಲಿದೆ ಎಂದು ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next