Advertisement

2,500 ಪ್ರೌಢಶಾಲಾ ಶಿಕ್ಷಕರ ನೇಮಕ: ಸಚಿವ ನಾಗೇಶ್‌

10:09 PM Sep 12, 2022 | Team Udayavani |

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವುದಕ್ಕಾಗಿ 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಅವರು, 2,200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಣ ಶಿಕ್ಷಕರು ಮತ್ತು 100 ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸದ್ಯದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟಿಸುವ ಸಾಧ್ಯತೆಗಳಿವೆ.

ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಬೋಧನೆಗಾಗಿ (6ರಿಂದ 8ನೇ ತರಗತಿ) 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ 1:2ರ ಅನುಪಾತ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ. ಹೀಗಿರುವಾಗಲೇ ಮತ್ತೆ 2,500 ಶಿಕ್ಷಕರ ನೇಮಕಾತಿಗೆ ಸಿದ್ಧತೆ ನಡೆಸಿರುವುದು ಶಿಕ್ಷಕ ಹುದ್ದೆ ಆಕಾಂಕ್ಷಿಗಳಲ್ಲಿ ಖುಷಿ ನೀಡಿದೆ.

ಸದ್ಯ 6 ಸಾವಿರಕ್ಕೂ ಹೆಚ್ಚಿನ ಅತಿಥಿ ಶಿಕ್ಷಕರು ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next